ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.

ರಾಜ್ಯ ಸರ್ಕಾರದ ವತಿಯಿಂದ ಪ್ರಪ್ರಥಮ ಬಾರಿಗೆ ಆಯೋಜಿಸಿದ್ದ ಸರ್ಕಾರಿ ನೌಕರರ ದಿನಾಚರಣೆಯ ಸುಸಂದರ್ಭದಲ್ಲಿ ಆರೋಗ್ಯ ಸಂಜೀವಿನಿ ನಗದು ರಹಿತ ವೈದ್ಯಕೀಯ ಸೇವಾ ಯೋಜನೆಗೆ ಚಾಲನೆ ನೀಡಿ, 30 ನೌಕರರಿಗೆ ತಲಾ ಐವತ್ತು ಸಾವಿರ ರೂಪಾಯಿ ನಗದು ಒಳಗೊಂಡ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಏಳನೇ ವೇತನ ಆಯೋಗದ ಕುರಿತು ತಿಳಿಸಿದ್ದಾರೆ.

ಸರ್ಕಾರಕ್ಕೆ ತೆರಿಗೆ ಪಾವತಿಸುವ ಪ್ರಜೆಗಳೇ ನಮ್ಮ ಮಾಲೀಕರು. ಕಾರ್ಯಾಂಗ ಸರ್ಕಾರದ ಪ್ರಮುಖವಾದ ಒಂದು ಭಾಗ ಮತ್ತು ಅಂಗ. ಬೆಳಗ್ಗೆಯಿಂದ ಸಂಜೆಯವರೆಗೆ ಮಾಡುವ ಕೆಲಸ, ಕರ್ತವ್ಯ ಎನಿಸುತ್ತದೆ. ಬದುಕಿನಲ್ಲಿ ಸೇವೆ ಮಾಡಿ ಸಂತೃಪ್ತಿ ಪಡೆಯುವುದು ಕಾಯಕ. ಆದ ಕಾರಣ, ಕಾಲಕ್ಕೆ ತಕ್ಕಂತೆ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಪ್ರಜೆಗಳ ನೋವು ನಲಿವುಗಳಿಗೆ ಸ್ಪಂದಿಸಿ ಎಂದರು.

Leave A Reply

Your email address will not be published.