SC/ST, BPL ಕಾರ್ಡ್‌ದಾರರಿಗೆ, ಪೌರಕಾರ್ಮಿಕರಿಗೆ ರಾಜ್ಯ ಸಚಿವ ಸಂಪುಟದಿಂದ ಗುಡ್ ನ್ಯೂಸ್

ಬೆಂಗಳೂರು : ವಿಧಾನಸಭೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದ್ದು, ಈ ವೇಳೆ, SC/ST, BPL ಕಾರ್ಡ್‌ದಾರರಿಗೆ, ಪೌರಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಿದೆ.

 

ಹೌದು. SC/ST, BPL ಕಾರ್ಡ್‌ದಾರರಿಗೆ 75 ಯುನಿಟ್‌ ತನಕ ಉಚಿತ ವಿದ್ಯುತ್‌ ನೀಡಲು ರಾಜ್ಯ ಸಚಿವ ಸಂಪುಟ ಗ್ರೀನ್‌ ಸಿಗ್ನಲ್‌ ನೀಡಿದೆ. ಈ ಮೂಲಕ ಕಾರ್ಡ್ ದಾರರಿಗೆ ಸಿಹಿಸುದ್ದಿ ದೊರಕಿದೆ.

ಅಲ್ಲದೆ, ರಾಜ್ಯದ ನಗರಸಭೆ, ಪುರಸಭೆ ಮತ್ತು ಇತರೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 11,133 ಪೌರಕಾರ್ಮಿಕರನ್ನು ವಿಶೇಷ ನೇಮಕಾತಿಯಲ್ಲಿ ಸಕ್ರಮ ಮಾಡಲು ಕೂಡ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಹೊರಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದ ಪೌರ ಕಾರ್ಮಿಕರನ್ನು ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಹಾಗೂ ಬಿಬಿಎಂಪಿಯ 3673, ನಗರಸಭೆ ಮತ್ತು ಪುರಸಭೆ 5533 ಹಾಗೂ ಮಹಾನಗರ ಪಾಲಿಕೆಗಳಲ್ಲಿನ 1921 ಗುತ್ತಿಗೆ ನೌಕರರನ್ನು ಖಾಯಂ ಮಾಡಿಕೊಳ್ಳಲಾಗುತ್ತಿದೆ. ಈ ಮೂಲಕ ಹೊರ ಗುತ್ತಿಗೆ ಪೌರ ಕಾರ್ಮಿಕರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ.

ಸಚಿವ ಸಂಪುಟ ಸಭೆಯಲ್ಲಿ SSLC, PU ಪರೀಕ್ಷಾ ಮಂಡಳಿ ವಿಲೀನಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ಪರೀಕ್ಷಾ ಮಂಡಳಿಗಳನ್ನ ವಿಲೀನಗೊಳಿಸಿ ಏಕರೂಪ ಪರೀಕ್ಷಾ ಮಂಡಳಿಯನ್ನ ಜಾರಿಗೆ ತರಲು ನಿರ್ಧರಿಸಲಾಗಿದೆ. ಅನಗತ್ಯ ಖರ್ಚು, ಹೆಚ್ಚುವರಿ ಸಿಬ್ಬಂದಿ ನೇಮಕ ಸೇರಿದಂತೆ ಹಲವು ಅನಗತ್ಯ ಖರ್ಚಿಗೆ ಬ್ರೇಕ್ ಹಾಕಲು SSLC, PU ಪರೀಕ್ಷಾ ಮಂಡಳಿ ವಿಲೀನಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿದು ಬಂದಿದೆ.

Leave A Reply

Your email address will not be published.