KPSC Recruitment : ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ | ಆನ್ಲೈನ್ ಲಿಂಕ್ ಪ್ರಕಟ
ಕರ್ನಾಟಕ ಲೋಕ ಸೇವಾ ಆಯೋಗದಿಂದ (Karnataka Public Service Commission) ( KPSC) ಮೀನುಗಾರಿಕೆ ಸಹಾಯಕ ನಿರ್ದೇಶಕರ (Assistant Director of Fisheries) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಹೈದ್ರಾಬಾದ್-ಕರ್ನಾಟಕ ವೃಂದದಲ್ಲಿನ ಖಾಲಿ ಇರುವ ಗ್ರೂಪ್-ಬಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20 ಸೆಪ್ಟೆಂಬರ್ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19 ಅಕ್ಟೋಬರ್ 2022
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 20 ಅಕ್ಟೋಬರ್ 2022
ಸಂಸ್ಥೆಯ ಹೆಸರು: ಕರ್ನಾಟಕ ಲೋಕಸೇವಾ ಆಯೋಗ (KPSC)
ಹುದ್ದೆಯ ಹೆಸರು: ಸಹಾಯಕ ಮೀನುಗಾರಿಕಾ ನಿರ್ದೇಶಕರು
ಹುದ್ದೆಗಳ ಸಂಖ್ಯೆ: 8
ಉದ್ಯೋಗ ಸ್ಥಳ: ಕರ್ನಾಟಕ
ವೇತನ: 40900-78200 ರೂ. ಪ್ರತಿ ತಿಂಗಳು
ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಬಿಎಫ್ಎಸ್ಸಿ ಪದವಿ ಅನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ಅರ್ಜಿ ಸಲ್ಲಿಕೆ: ಆನ್ಲೈನ್
ವಯೋಮಿತಿ ಸಡಿಲಿಕೆ:
ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳು: 5 ವರ್ಷಗಳು
ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳು: 3 ವರ್ಷಗಳು
ವಿಕಲಚೇತನ, ವಿಧವೆ ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿ ಶುಲ್ಕ: ಪ.ಜಾ, ಪ.ಪಂ, ಪ್ರವರ್ಗ 1ಎ ಮತ್ತು ವಿಕಲ ಚೇತನ ಅಭ್ಯರ್ಥಿಗಳು: 35 ರೂ.
ಮಾಜಿ ಸೈನಿಕ ಅಭ್ಯರ್ಥಿಗಳು: 85 ರೂ.
ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳು: 335 ರೂ. ಸಾಮಾನ್ಯ ಅಭ್ಯರ್ಥಿಗಳು: 635 ರೂ.
ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ