ಬಾಲಿವುಡ್‌ನ ಖ್ಯಾತ ಹಾಸ್ಯ ನಟ ರಾಜು ಶ್ರೀ ವಾಸ್ತವ್ ಇನ್ನಿಲ್ಲ

ದೆಹಲಿ : ಬಾಲಿವುಡ್‌ನ ಖ್ಯಾತ ಹಾಸ್ಯ ನಟ ರಾಜು ಶ್ರೀವಾಸ್ತವ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣದಿಂದಾಗಿ ದೆಹಲಿಯ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಕಳೆದ ಒಂದು ತಿಂಗಳಿಂದಲೂ ಅವರು ಕೋಮಾದಲ್ಲಿದ್ದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಆಗಸ್ಟ್ 10ರಂದು ಅವರನ್ನು ದೆಹಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

 

ಜಿಮ್ ನಲ್ಲಿ ವ್ಯಾಯಾಮ ಮಾಡುತ್ತಿರುವಾಗ ರಾಜು ಕೆಳಗೆ ಬಿದ್ದು ಪ್ರಜ್ಞೆ ತಪ್ಪಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಈವರೆಗೂ ಅವರಿಗೆ ಪ್ರಜ್ಞೆ ಮರಳಿ ಬರಲೇ ಇಲ್ಲ. ವೈದ್ಯರು ತಮ್ಮೆಲ್ಲ ಪ್ರಯತ್ನಗಳನ್ನು ಮಾಡಿದರೂ, ರಾಜು ಅವರನ್ನು ಉಳಿಸಿಕೊಳ್ಳಲು ಆಗಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ

Leave A Reply

Your email address will not be published.