ಇನ್ನು ಮುಂದೆ ಶಾಲೆಗಳಲ್ಲಿ 5.30 ಗಂಟೆ ತರಗತಿ ಕಡ್ಡಾಯ – ಶಿಕ್ಷಣ ಇಲಾಖೆ

ಶಿಕ್ಷಣ ಇಲಾಖೆ ಖಾಸಗಿ ಶಾಲೆಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ಅದೇನೆಂದರೆ ಶಾಲೆಗಳಲ್ಲಿ 5.30 ಗಂಟೆ ತರಗತಿ ಕಡ್ಡಾಯವಾಗಿ ನಡೆಸಬೇಕು. ಈ ನಿಯಮ ಪಾಲಿಸದ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಫಲವಾಗಿರುವ ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ಧ ಇಲಾಖೆ ಕ್ರಮಕ್ಕೆ ಮುಂದಾಗಿದೆ.

 

ಅಷ್ಟು ಮಾತ್ರವಲ್ಲದೇ, ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಕೂಡಾ ಎಚ್ಚರಿಕೆ ಗಂಟೆ ನೀಡಿದೆ.

ಬಹುತೇಕ ಖಾಸಗಿ ಶಾಲೆಗಳಲ್ಲಿ ಮನ ಬಂದಂತೆ ತರಗತಿಗಳನ್ನು ನಡೆಸಲಾಗುತ್ತಿದ್ದು, ಈ ಕುರಿತಾಗಿ ಸಾರ್ವಜನಿಕರು, ಸಂಘ -ಸಂಸ್ಥೆಗಳಿಂದ ಅನೇಕ ದೂರುಗಳು ಸಲ್ಲಿಕೆಯಾಗಿವೆ. ಈ ದೂರುಗಳ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಶಿಕ್ಷಣ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ತೋರಿದಲ್ಲಿ ಅಂತವರ ವಿರುದ್ಧ ಕ್ರಮ ನಿಯಮಾನಸಾರ ಕ್ರಮ ಕೈಗೊಳ್ಳಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಪ್ರತಿದಿನ ಕಡ್ಡಾಯವಾಗಿ 5.30 ತಾಸು ತರಗತಿಗಳನ್ನು ನಡೆಸಬೇಕು ಎಂಬ ನಿಯಮ ಪಾಲಿಸದ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

Leave A Reply

Your email address will not be published.