KPSC ಮಹತ್ವದ ಮಾಹಿತಿ, ಗ್ರೂಪ್-ಎ, ಬಿ ನೇಮಕಾತಿ ನಿಯಮಕ್ಕೆ ತಿದ್ದುಪಡಿ
‘ರಾಜ್ಯ ಸರ್ಕಾರ’ದಿಂದ ‘ಗ್ರೂಪ್-ಎ, ಬಿ ಹುದ್ದೆ’ಗಳ ಪರೀಕ್ಷೆ, ಹಾಗೂ ಆಯ್ಕೆ ನಿಯಮ ಬದಲಿಸಿ `ಗೆಜೆಟ್ ಅಧಿಸೂಚನೆ’ ಹೊರಡಿಸಿದೆ. ಗೆಜೆಟ್ ಅಧಿಸೂಚನೆ ಸೂಚನೆಯ ಸಂಪೂರ್ಣ ವಿವರ ಈ ಕೆಳಗೆ ನೀಡಲಾಗಿದೆ.
ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ (14) 8ನೇ ಪುಕರಣದೊಂದಿಗೆ ಓದಲಾದಂತೆ, 3ನೇ ಪ್ರಕರಣದ (1)ನೇ ಉಪ-ಪಕರಣದ ಮೂಲಕ ಪದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ರಚಿಸಲು ಉದ್ದೇಶಿಸಿರುವಂಥ ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ಕ್ಕೆ ತಿದ್ದುಪಡಿ ಮಾಡುವ ಸಲುವಾಗಿ ಈ ಕೆಳಗಿನ ನಿಯಮಗಳ ಕರಡನ್ನು, ಸದರಿ ಅಧಿನಿಯಮದ 3ನೇ ಪ್ರಕರಣದ (2) ನೇ ಉಪ ಪುಕರಣದ (ಎ) ಖಂಡದ ಮೂಲಕ ಅಗತ್ಯಪಡಿಸಲಾದಂತೆ ಇದರಿಂದ ಬಾಧಿತರಾಗುವ ಸಂಭವವಿರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ, ಈ ಮೂಲಕ ಪ್ರಕಟಿಸಲಾಗಿದೆ ಮತ್ತು ಸದರಿ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ ಹದಿನೈದು ದಿನಗಳ ನಂತರ ಪರಿಗಣನೆಗೆ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ಸೂಚಿಸಲಾಗಿದೆ.
ಸದರಿ ಕರಡಿಗೆ ಸಂಬಂಧಪಟ್ಟಂತೆ ಮೇಲೆ ಗೊತ್ತುಪಡಿಸಿದ ಅವಧಿ ಕೊನೆಗೊಳ್ಳುವ ಮುಂಚೆ ಯಾರೇ ವ್ಯಕ್ತಿಯಿಂದ ರಾಜ್ಯ ಸರ್ಕಾರವು ಸ್ವೀಕರಿಸಬಹುದಾದ ಯಾವುದೇ ಆಕ್ಷೇಪಣೆ ಅಥವಾ ಸಲಹೆಯನ್ನು ಸರ್ಕಾರವು ಪರಿಗಣಿಸುತ್ತದೆ. ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಸರ್ಕಾರದ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ವಿಧಾನಸೌಧ, ಬೆಂಗಳೂರು-560001 ಇವರಿಗೆ ಸಲ್ಲಿಸತಕ್ಕದ್ದು.
1. ಶೀರ್ಷಿಕೆ ಮತ್ತು ಪ್ರಾರಂಭ.- (1) ಈ ನಿಯಮಗಳನ್ನು ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) (2ನೇ ತಿದ್ದುಪಡಿ) ನಿಯಮಗಳು, 2022 ಎಂದು ಕರೆಯತಕ್ಕದ್ದು, (2) ಇವು ಅಧಿಕೃತ ರಾಜ್ಯಪತ್ರದಲ್ಲಿ ಅಂತಿಮವಾಗಿ ಪ್ರಕಟಗೊಂಡ ದಿನಾಂಕದಿಂದ ಜಾರಿಗೆ ಬರತಕ್ಕದ್ದು.
2. ನಿಯಮ 6 ರ ತಿದ್ದುಪಡಿ, ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು, 2021 ರ ನಿಯಮ 6 ರ ಉಪ ನಿಯಮ (1) ರಲ್ಲಿ – (1) ಖಂಡ (ಎ) ರ ಬದಲಿಗೆ ಈ ಕೆಳಕಂಡಂತೆ ಪ್ರತಿಸ್ಥಾಪಿಸತಕ್ಕದ್ದು. *(ಎ) ಸಂದರ್ಶನವಿಲ್ಲದ ಗ್ರೂಪ್-ಎ ಮತ್ತು ಗ್ರೂಪ್-ಬಿ ಹುದ್ದೆಗಳಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯು ತಲಾ 300 ಅಂಕಗಳ ಎರಡು ಲಿಖಿತ ಪ್ರಶ್ನೆ ಪತ್ರಿಕೆಗಳನ್ನು ಒಳಗೊಂಡಿದ್ದು, ವಸ್ತುನಿಷ್ಠ ಬಹು ಆಯ್ಕೆ ಸ್ಮರೂಪದಲ್ಲಿ ಇರತಕ್ಕದ್ದು. ಪ್ರತಿಯೊಂದು ಪ್ರಶ್ನೆಯು ಋಣಾತ್ಮಕ ಅಂಕವನ್ನು ಒಳಗೊಂಡಿರತಕ್ಕದ್ದು ಮತ್ತು ಅಂಥ ಪ್ರಶ್ನೆಗಳಿಗೆ ಹಂಚಿಕೆ ಮಾಡಲಾದ ಅಂಕಗಳಲ್ಲಿ ನಾಲ್ಕನೇ ಒಂದು ಭಾಗದಷ್ಟು (1/4) ಅಂಕಗಳನ್ನು ಪ್ರತಿಯೊಂದು ತಪ್ಪಾದ ಉತ್ತರಕ್ಕೆ ಕಡಿತಗೊಳಿಸತಕ್ಕದ್ದು. (ಬಿ) ಸಂದರ್ಶನವಿರುವ ಗ್ರೂಪ್-ಎ ಹುದ್ದೆಗಳಿಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯು ತಲಾ 300 ಅಂಕಗಳ ಎರಡು ಲಿಖಿತ ಪ್ರಶ್ನೆ ಪತ್ರಿಕೆಗಳನ್ನು ಒಳಗೊಂಡಿದ್ದು, ‘ವಿವರಣಾತ್ಮಕ ಸ್ವರೂಪ’ದಲ್ಲಿರತಕ್ಕದ್ದು. ಗ್ರೂಪ್-ಎ ಮತ್ತು ಗ್ರೂಪ್-ಬಿ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯ ಎರಡು ಪತ್ರಿಕೆಗಳಿಗೆ ಸಂಬಂಧಿಸಿದಂತೆ ಪಠ್ಯಕ್ರಮವು ಈ ಕೆಳಕಂಡಂತೆ ಇರತಕ್ಕದ್ದು
(i) ಪತ್ರಿಕೆ-1 ಸಾಮಾನ್ಯ ಪತ್ರಿಕೆ:- ಪುಚಲಿತ ವಿದ್ಯಮಾನಗಳು, ಸಾಮಾನ್ಯ ವಿಜ್ಞಾನ, ಕರ್ನಾಟಕ ಇತಿಹಾಸ ಮತ್ತು ಭೂಗೋಳ ಶಾಸ್ತ್ರ ಭಾರತದ ಇತಿಹಾಸ ಮತ್ತು ಭೂಗೋಳ ಶಾಸ್ತ್ರ ಸಮಾಜ ವಿಜ್ಞಾನ, ಸಾಮಾನ್ಯ ಬೌದ್ಧಿಕ ಸಾಮರ್ಥ್ಯಕ್ಕೆ ಸಂಬಂಧಿಸಿದ ಸಾಮಾನ್ಯ ಜ್ಞಾನದ ವಿಷಯಗಳನ್ನು ದೈನಂದಿನ ಗ್ರಹಿಕೆಯ ವಿಷಯಗಳನ್ನು ಮತ್ತು ನಿಗದಿಪಡಿಸಲಾದ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣನಾಗಿರುವ ವ್ಯಕ್ತಿಯಿಂದ ನಿರೀಕ್ಷಿಸಬಹುದಾದ ಪ್ರಾಯೋಗಿಕ ಜ್ಞಾನವನ್ನು ಒಳಗೊಂಡಿರಬೇಕು. (ii) ಪತ್ರಿಕೆ
II- ನಿರ್ದಿಷ್ಟ ಪತ್ರಿಕೆ:- ಈ ಪತ್ರಿಕೆಯ ಪಠ್ಯಕ್ರಮವನ್ನು ಆಯ್ಕೆ ಪ್ರಾಧಿಕಾರವು ಯಾವ ಹುದ್ದೆಗೆ ಆಯ್ಕೆ ಮಾಡಲಾಗುತ್ತಿದೆಯೋ ಆ ಹುದ್ದೆಯ ಸ್ವರೂಪವನ್ನು ದೃಷ್ಟಿಯಲ್ಲಿಟ್ಟುಕೊಂಡು ಮತ್ತು ಸಂಬಂಧಪಟ್ಟ ಕ್ಷೇತ್ರ ಇಲಾಖೆ ಅಥವಾ ನೇಮಕಾತಿ ಪ್ರಾಧಿಕಾರದೊಂದಿಗೆ ಸಮಾಲೋಚಿಸಿ ನಿರ್ಧರಿಸತಕ್ಕದ್ದು. (2) ಚಾಲ್ತಿಯಲ್ಲಿರುವ ಖಂಡ (ಬಿ) ಮತ್ತು (ಸಿ) ಗಳನ್ನು ಕ್ರಮವಾಗಿ (ಸಿ) ಮತ್ತು (ಡಿ) ಎಂದು ಮರು ಸಂಖ್ಯಿಕರಣಗೊಳಿಸಿದೆ.