ಕರ್ನಾಟಕದಲ್ಲಿ ವಿಧ್ವಂಸಕ ಕೃತ್ಯಕ್ಕೆ ಪಿತೂರಿ | ಭೂಗತ ಶಂಕಿತನ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

ಮಂಗಳೂರು: ಐಸಿಸ್ ಉಗ್ರಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಇಬ್ಬರು ಶಂಕಿತ ಉಗ್ರರನ್ನು ಶಿವಮೊಗ್ಗದಲ್ಲಿ ಬಂಧಿಸಿದ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಓರ್ವನನ್ನು ಪೊಲೀಸರು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ವಿಚಾರಣೆ ಮಾಡುತ್ತಿದ್ದಾರೆ.

 

ಈ ಬಂಧಿತ ಮಂಗಳೂರು ಮೂಲದ ಮಾಜ್ ಮುನೀರ್ ಅಹ್ಮದ್ ಮತ್ತು ನಾಪತ್ತೆಯಾಗಿರುವ ಶಂಕಿತ ಉಗ್ರ ಮೊಹಮ್ಮದ್ ಶರೀಕ್ ಜೊತೆ ನಂಟು ಹೊಂದಿದ್ದ ಎನ್ನಲಾಗಿದೆ. ಮಂಗಳೂರಿನ ಅನ್ಸರ್ ಎಂಬಾತನನ್ನು ವಶಕ್ಕೆ ಪಡೆದ ಪೊಲೀಸರು ಅಜ್ಞಾತ ಸ್ಥಳದಲ್ಲಿ ಇರಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈಗಾಗಲೇ ಬಂಧಿತರ ಶಂಕಿತರ ಸಂಖ್ಯೆ ಮೂರಕ್ಕೇರಿದ್ದು, ತಲೆಮರೆಸಿಕೊಂಡಿರುವ ಶಿವಮೊಗ್ಗ ಮೂಲದ ಮೂಲದ ಮತ್ತೋರ್ವನ ಬಂಧನಕ್ಕೆ ತನಿಖೆ ತೀವ್ರಗೊಂಡಿದೆ.

ಕರ್ನಾಟಕದಲ್ಲಿ ಭಯೋತ್ಪಾದಕ ಕೃತ್ಯ ನಡೆಸಲು ಭಾರಿ ಸಂಚು ರೂಪಿಸಿದ್ದು, ಐಸಿಸ್ ಉಗ್ರ ಸಂಘಟನೆಯ ಸಂಪರ್ಕಿದಲ್ಲಿದ್ದುಕೊಂಡಿದ್ದ ಇಬ್ಬರು ಶಂಕಿತರನ್ನು ಶಿವಮೊಗ್ಗದಲ್ಲಿ ಪೊಲೀಸರು ಬಂಧಿಸಿದ್ದರು. ಇವರನ್ನು 9 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಶಿವಮೊಗ್ಗದ 3ನೇ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ನೀಡಿದೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆ ನಿವಾಸಿ ಶಾರಿಕ್‌ಗಾಗಿ ಶೋಧ ಮುಂದುವರಿದಿದೆ.

ಎಲೆಕ್ಟ್ರಾನಿಕ್ ಮತ್ತು ಎಲೆಕ್ಟ್ರಿಕಲ್ ವಿಭಾಗದಲ್ಲಿ ಎಂಜಿನಿಯರಿಂಗ್ ಆಗಿರುವ ಸೈಯ್ಯದ್ ಯಾಸಿನ್ ಅಲಿಯಾಸ್ ಯಾಸೀನ್ ಅಲಿಯಾಸ್ ಬೈಲು ನನ್ನು ಬಂಧಿಸಿ ಪ್ರಕರಣ ದಾಖಲಿಸಿರುವ ಪೊಲೀಸರು ಕರ್ನಾಟಕದಲ್ಲಿ ಉಗ್ರ ಚಟುವಟಿಕೆ ನಡೆಯಲು ವ್ಯವಸ್ಥಿತ ಪಿತೂರಿ ರೂಪಿಸಿದ್ದರು ಎಂದು ಹೇಳಲಾಗಿದೆ.

ಅಷ್ಟು ಮಾತ್ರವಲ್ಲದೇ, ಬಂಧಿತರ ಇಬ್ಬರ ಮೊಬೈಲ್‌ನಲ್ಲಿ ಬಾಂಬ್ ತಯಾರಿಕೆ ಮತ್ತು ವಿಧ್ವಂಸಕ ಕೃತ್ಯದ ವಿಡಿಯೋ ಪೊಲೀಸ್ ಪರಿಶೀಲನೆ ವೇಳೆ ಪತ್ತೆಯಾಗಿದೆ. ಇವರು ಸಣ್ಣ

ತೀರ್ಥಹಳ್ಳಿಯ ಭೂಗತ ಶಂಕಿತರ ಉಗ್ರ ಮತೀನ್ ತಲೆಮರೆಸಿಕೊಂಡು ಎರಡು ವರ್ಷಗಳು ಕಳೆದಿವೆ. ಈತನ ಬಗ್ಗೆ ಇನ್ನೂ ಸುಳಿವು ದೊರೆತಿಲ್ಲ. ಈತ ತೀರ್ಥಹಳ್ಳಿಯಲ್ಲಿ ಸ್ಯಾಟಲೈಟ್ ಫೋನ್ ಬಳಕೆ ಮಾಡಿರುವುದು ಪತ್ತೆ ಆಗಿದೆ. ಹಾಗಾಗಿ ಈ ವ್ಯಕ್ತಿಯ ಬಂಧನಕ್ಕೆ ಎನ್‌ಐ ತಯಾರಿ ನಡೆಸಿದೆ. ಈತನ ಕುರಿತು ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ಘೋಷಣೆ ಮಾಡಲಾಗಿದೆ. ಶಂಕಿತ ಉಗ್ರ ಮತೀನ್ ತಮಿಳುನಾಡಿನ ಹಿಂದೂ ಕಾರ್ಯಕರ್ತನ ಹತ್ಯೆಯ ಆರೋಪಿ ಆಗಿದ್ದಾನೆ.

ಈ ಘಟನೆ ಬೆಳಕಿಗೆ ಬಂದದ್ದು, ಶಿವಮೊಗ್ಗದಲ್ಲಿ ಇತ್ತೀಚೆಗೆ ನಡೆದಿದ್ದ ಪ್ರೇಮ್ ಸಿಂಗ್ ಚಾಕು ಇರಿತ ಪ್ರಕರಣದ ತನಿಖೆಯಿಂದ. ವಿಚಾರಣೆಯ ಸಂದರ್ಭದಲ್ಲಿ ಶಂಕಿತ ಉಗ್ರರ ಚಟುವಟಿಕೆ ಬಗ್ಗೆ ಮಾಹಿತಿ ದೊರಕಿದೆ. ಬಂಧಿತ ಉಗ್ರ ಮೊಬೈಲ್‌ನಲ್ಲಿ ವಿಧ್ವಂಸಕ ಕೃತ್ಯ ಎಲ್ಲ ಮಾಹಿತಿಗಳು ಪತ್ತೆಯಾಗಿದೆ.

ಶಿವಮೊಗ್ಗ ಪೊಲೀಸರಿಂದ ಬಂಧಿತರಾಗಿರುವ ಇಬ್ಬರು ಶಂಕಿತ ಉಗ್ರರನ್ನು ಚಿಕ್ಕಲ್ ಭಾಗದ ತುಂಗಾ ನದಿ ತೀರಕ್ಕೆ ಕೊಂಡೊಯ್ದು ಸ್ಥಳ ಮಹಜರು ಮಾಡಲಾಗಿದೆ. ಬಂಧಿತ ಶಂಕಿತ ಉಗ್ರ ಯಾಸೀನ್‌ನನ್ನು ಕರೆದೊಯ್ದು ಸ್ಥಳ ಮಹಜರು ನಡೆಸಲಾಗಿದ್ದು, ಎಸ್‌ಪಿ ಲಕ್ಷ್ಮೀ ಪ್ರಸಾದ್, ಪ್ರಕರಣದ ತನಿಖಾ ಅಧಿಕಾರಿಗಳು ಇದ್ದರು.

Leave A Reply

Your email address will not be published.