ಏರ್​ ಇಂಡಿಯಾ ವಿಮಾನಯಾನ ಸಂಸ್ಥೆಯಲ್ಲಿ ಉದ್ಯೋಗವಕಾಶ | ಪಿಯುಸಿ ಆದವರಿಗೆ ಅವಕಾಶ ; ಅರ್ಜಿ ಸಲ್ಲಿಸಲು ಕೊನೆ ದಿನ-ಸೆ.26

ಏರ್​ ಇಂಡಿಯಾ ವಿಮಾನ ಯಾನ ಸಂಸ್ಥೆಯಲ್ಲಿ ವಿವಿಧ ಕ್ಯಾಬಿನ್​ ಕ್ರೂ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ (PUC) ಆಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

 

ಹುದ್ದೆ, ಹುದ್ದೆ ಸಂಖ್ಯೆ:
ಸಂಸ್ಥೆ : ಏರ್ ಇಂಡಿಯಾ ಲಿಮಿಟೆಡ್
ಹುದ್ದೆ : ಕ್ಯಾಬಿನ್ ಕ್ರ್ಯೂ
ಹುದ್ದೆ ಸಂಖ್ಯೆ: ನಿರ್ದಿಷ್ಟ ಪಡಿಸಿಲ್ಲ
ವೇತನ : ಏರ್​ ಇಂಡಿಯಾ ನಿಯಮದ ಪ್ರಕಾರ

ಶೈಕ್ಷಣಿಕ ಅರ್ಹತೆ : ಏರ್ ಇಂಡಿಯಾ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 12 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ : ಏರ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 22 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ :
ಅನುಭವಿ ಸಿಬ್ಬಂದಿ ಅಭ್ಯರ್ಥಿಗಳು: 10 ವರ್ಷಗಳು

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು :
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 20 ಸೆಪ್ಟೆಂಬರ್​ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26 ಸೆಪ್ಟೆಂಬರ್​ 2022

ಹುದ್ದೆ ಅರ್ಹತೆ:
*ಅಗತ್ಯವಿರುವ ಕನಿಷ್ಠ ಎತ್ತರ: ಮಹಿಳಾ ಅಭ್ಯರ್ಥಿಗಳು – 157 ಸೆಂ / ಪುರುಷ ಅಭ್ಯರ್ಥಿಗಳು – 172 ಸೆಂ ಇರಬೇಕು
*ತೂಕ: ಎತ್ತರಕ್ಕೆ ಅನುಗುಣವಾಗಿ
*ಇಂಗ್ಲಿಷ್ ಮತ್ತು ಹಿಂದಿಯಲ್ಲಿ ನಿರರ್ಗಳವಾಗಿ ಮಾತನಾಡಬೇಕು
*ದೃಷ್ಟಿ 6/6

ಅರ್ಜಿ ಸಲ್ಲಿಕೆ ವಿಧಾನ:
*ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
*ಅಧಿಕೃತ ವೆಬ್​ಸೈಟ್​ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್​ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಮೇಲ್ಕಂಡ ಇಮೇಲ್​ ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಕಳುಹಿಸಬೇಕು.
*ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.
*ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ.

ಅಧಿಕೃತ ವೆಬ್‌ಸೈಟ್: airindia.in

Leave A Reply

Your email address will not be published.