Fake app alert | ಸರ್ಕಾರದಿಂದ ಎಚ್ಚರಿಕೆಯ ಸಂದೇಶ

0 7

ಗೂಗಲ್ ತನ್ನ ಪ್ಲೇ ಸ್ಟೋರ್​ನಲ್ಲಿ ಕಂಡುಬಂದಿದ್ದ 50 ಅಪಾಯಕಾರಿ ಅಪ್ಲಿಕೇಶನ್‌ಗಳ ಪಟ್ಟಿಯನ್ನು ಪರಿಶೀಲಿಸಿ ಅವುಗಳನ್ನು ನೀವು ಇನ್​ಸ್ಟಾಲ್ ಮಾಡಿದ್ದರೆ ತಕ್ಷಣವೇ ಡಿಲೀಟ್​ ಮಾಡುವಂತೆ ಸೂಚನೆ ನೀಡಿತ್ತು. ಇದೀಗ ಮತ್ತೆ ಪ್ಲೇ ಸ್ಟೋರ್​ನಲ್ಲಿ ಫೇಕ್ ಆಪ್ ಪತ್ತೆಯಾದ ಸೂಚನೆ ಲಭ್ಯವಾಗಿದೆ.

ನಿಮ್ಮ ಫೋನ್‌ನಲ್ಲಿ ಯಾವುದೇ ಅಪ್ಲಿಕೇಶನ್ ಡೌನ್‌ಲೋಡ್ ಮಾಡುವ ಮೊದಲು, ಕೆಲವೊಂದನ್ನು ಪರಿಶೀಲಿಸಿ. ಈ ನಕಲಿ ಆಪ್​ಗಳನ್ನು ನೀವು ಡೌನ್ಲೋಡ್ ಮಾಡಿ ಇನ್ಸ್ಟಾಲ್ ಮಾಡಿಕೊಂಡರೆ ಅಪಾಯಕಟ್ಟಿಟ್ಟ ಬುತ್ತಿ. ಬಳಕೆದಾರರ ಖಾಸಗಿ ಫೋಟೋ, ವಿಡಿಯೋ, ಬ್ಯಾಂಕಿಂಗ್ ಮಾಹಿತಿಯನ್ನು ಕದಿಯುವುದು ಈ ಆಯಪ್​ನ ಮುಖ್ಯ ಉದ್ದೇಶ. ಭಾರತ ಸರ್ಕಾರದ ನೋಡಲ್ ಸೈಬರ್‌ ಸೆಕ್ಯುರಿಟಿ ಏಜೆನ್ಸಿ Cert-In ಇತ್ತೀಚೆಗೆ ಭಾರತದಲ್ಲಿ ಬ್ಯಾಂಕಿಂಗ್ ಬಳಕೆದಾರರನ್ನು ಗುರಿಯಾಗಿಸಿಕೊಂಡು SOVA ಆಂಡ್ರಾಯ್ಡ್ ಟ್ರೋಜನ್ ವಿರುದ್ಧ ಎಚ್ಚರಿಕೆ ನೀಡಿದೆ. ಜೊತೆಗೆ ನಕಲಿ ಆಯಪ್ ಗುರುತಿಸುವ ಬಗ್ಗೆ ಮಾಹಿತಿ ನೀಡಿದೆ.

ಸೆಕ್ಯುರಿಟಿ ತಂತ್ರಜ್ಞರು ಎಚ್ಚರಿಸಿದ ಪ್ರಕಾರ, ವೈರಸ್ ಕ್ಲೀನರ್, ವೈರಸ್ ಬೂಸ್ಟರ್, ಆಯಂಟಿ ವೈರಸ್, ಆಪ್ ಲಾಕ್, ಕ್ಲೀನರ್, ಆಯಂಟಿ ವೈರಸ್ ಫ್ರೀ, ವೈರಸ್ ರಿಮೂವರ್, ಗೇಮ್ ಬಿಲಿಯರ್ಡ್ಸ್, ಚಿಲ್ಡ್ರನ್ ಪೊಲೀಸ್, ಗೇಮ್ ಆಫ್ ಕಾರ್ಸ್ ಹೀಗೆಲ್ಲ ವಿಭಿನ್ನ ಹೆಸರುಗಳಲ್ಲಿರುವ ಆಪ್ ಗಳು ನಕಲಿ ಎಂದು ತಜ್ಞರು ಎಚ್ಚರಿಸಿದ್ದಾರೆ. ಮೊದಲು ಆಪ್ ನ ನಿಖರ ಹೆಸರು ಪರೀಕ್ಷಿಸಿ ಡೆವಲಪರ್ ಯಾರೆಂದು ನೋಡಿರಿ. ನಂತರ ಆ ಆಪ್‌ಅನ್ನು ಎಷ್ಟು ಜನ ಡೌನ್ಲೋಡ್ ಮಾಡಿದ್ದಾರೆಂದು ನೋಡಿ, ಬಳಕೆದಾರ ರಿವ್ಯೂ ಓದಿ. ಹೆಚ್ಚು ಮಂದಿ ರೇಟಿಂಗ್ಸ್ ನೀಡಿದ್ದರೆ ಮತ್ತು ಅದರ ರೇಟಿಂಗ್ 4 ಕ್ಕಿಂತ ಮೇಲ್ಪಟ್ಟು ಇದ್ದರೆ ಆ ಆಪ್ ಅನ್ನು ನೀವು ಇನ್​ಸ್ಟಾಲ್ ಮಾಡಿಕೊಳ್ಳಬಹುದು ಎಂದು ತಿಳಿಸಿದೆ.

ಆಯಂಟಿ ವೈರಸ್ ರೀತಿಯಲ್ಲಿ, ಕ್ಯಾಚೆ ಕ್ಲಿಯರಿಂಗ್ ರೂಪದಲ್ಲಿ ಫೇಕ್ ಆಯಪ್ ಗಳು ಮೊಬೈಲ್ ಬಳಕೆದಾರರನ್ನು ವಂಚಿಸುತ್ತವೆ. ಇಂತಹ ವೈರಸ್ ಆಪ್ ಗೇಮ್ಸ್ ಮತ್ತು ಶೈಕ್ಷಣಿಕ ರೂಪದಲ್ಲಿಯೂ ತಲೆಮರೆಸಿಕೊಂಡು ಕುಳಿತಿರುತ್ತವೆ. ಹೆಚ್ಚಿನ ನಕಲಿ ಆಪ್ ತಯಾರಕರು ತಮ್ಮ ಆಪ್ ಅನ್ನು ಹೆಚ್ಚು ಜಾಹಿತಾರುಗೊಳಿಸಿರುತ್ತಾರೆ. ಜಾಹಿರಾತು ಮೂಲಕ ಅಥವಾ ಪಾಪ್ ಅಪ್ ವಿಂಡೋಗಳ ಮೂಲಕ ಬೇರೆಯೇ ಹಲವು ಆಪ್​ಗಳನ್ನು ಇನ್​ಸ್ಟಾಲ್ ಮಾಡುವಂತೆ ಬಳಕೆದಾರರನ್ನು ಪ್ರಚೋದಿಸುತ್ತಲೇ ಇರುತ್ತವೆ. ಇಂತಹುಗಳು ಬಹುತೇಕ ದುರುದ್ದೇಶಪೂರಿತ ಕಿರು ತಂತ್ರಾಂಶಗಳೇ ಆಗಿರುತ್ತವೆ. ಹಾಗಾಗಿ, ಎಚ್ಚರಿಕೆಯಿಂದ ಇರುವುದು ಹೆಚ್ಚು ಸೂಕ್ತ..

Leave A Reply