Good News : ಗಂಗಾ ಕಲ್ಯಾಣ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್ : ವಯೋಮಿತಿ ಹೆಚ್ಚಳ ಆದೇಶ ಹೊರಡಿಸಿದ ಸರಕಾರ

ಗಂಗಾಕಲ್ಯಾಣ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಗಂಗಾ ಕಲ್ಯಾಣ ಫಲಾನುಭವಿಗಳ ವಯೋಮಿತಿಯನ್ನು 60 ವರ್ಷಕ್ಕೆ ನಿಗದಿಪಡಿಸಿ ಆದೇಶ ಹೊರಡಿಸಲಾಗಿದೆ.

 

ವಿಧಾನಸಭೆಯಲ್ಲಿ ಬಿಜೆಪಿಯ ಹರತಾಳು ಹಾಲಪ್ಪ ಪರವಾಗಿ ಎಂ.ಪಿ. ಕುಮಾರಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯ ನಿಗಮಗಳಿಂದ ಗಂಗಾ ಕಲ್ಯಾಣ ಯೋಜನೆಯಡಿ ಸೌಲಭ್ಯ ಪಡೆಯಲು ಫಲಾನುಭವಿಗಳ ವಯೋಮಿತಿಯನ್ನು ಗರಿಷ್ಠ 60 ವರ್ಷಕ್ಕೆ ನಿಗದಿಪಡಿಸಿ ಆದೇಶ ಹೊರಡಿಸಲಾಗಿದೆ. ಇನ್ನು ವಿಸ್ತರಣೆ ಮಾಡಬೇಕೆಂಬ ಮನವಿ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.

Leave A Reply

Your email address will not be published.