ಜನತೆಗೆ ವಿದ್ಯುತ್ ದರ ಏರಿಕೆಯ ಶಾಕ್! | ಪ್ರತಿ ಯೂನಿಟ್ ಮೇಲೆ 43 ಪೈಸೆ ದರ ಏರಿಕೆ

Share the Article

ದಿನೇ ದಿನೇ ದಿನಸಿ ವಸ್ತುಗಳಿಂದ ಹಿಡಿದು ಪ್ರತಿಯೊಂದಕ್ಕೂ ಬೆಲೆ ಹೆಚ್ಚುತ್ತಲೇ ಹೋಗುತ್ತಿದ್ದು, ದುಬಾರಿ ದುನಿಯಾ ಆಗುತ್ತಿದೆ. ಇದರ ನಡುವೆಯೇ ನವರಾತ್ರಿ ಹಬ್ಬದ ಸಂಭ್ರಮದಲ್ಲಿದ್ದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಶಾಕ್ ಎದುರಾಗಿದ್ದು , ವಿದ್ಯುತ್ ಏರಿಕೆಯ ಬೆಲೆ ತಟ್ಟಲಿದೆ.

ಕಳೆದ ಏಪ್ರಿಲ್‍ನಲ್ಲಿ ಬೆಸ್ಕಾಂ ಸೇರಿದಂತೆ ಎಲ್ಲಾ ಎಸ್ಕಾಂನಲ್ಲಿ ವಿದ್ಯುತ್ ದರ ಏರಿಕೆಯಾಗಿತ್ತು. ಈಗ ಅಕ್ಟೋಬರ್‌ನಲ್ಲಿ ಇಂಧನ ವೆಚ್ಚ ಶುಲ್ಕದ ಬಿಸಿ ಗ್ರಾಹಕರಿಗೆ ಮುಟ್ಟಲಿದ್ದು ಪ್ರತಿ ಯೂನಿಟ್ ಮೇಲೆ 43 ಪೈಸೆ ದರ ಏರಿಕೆಯಾಗಲಿದೆ.

ಇಂಧನ ಹೊಂದಾಣಿಕೆ ಶುಲ್ಕ ಹೆಚ್ಚಾಗಲಿದ್ದು ಅಕ್ಟೋಬರ್ 1 ರಿಂದಲೇ ಗ್ರಾಹಕರಿಗೆ ಶುಲ್ಕದ ಬರೆ ಬೀಳಲಿದ್ದು, ಮುಂದಿನ ವರ್ಷ ಮಾರ್ಚ್‍ವರೆಗೆ ಈ ದರ ಇರಲಿದೆ. ಇಂಧನ ಹೊಂದಾಣಿಕೆ ಶುಲ್ಕವನ್ನು ಮೂರು ತಿಂಗಳಿಗೊಮ್ಮೆ ಕೆಇಆರ್‌ಸಿಗೆ ಪರಿಶೀಲನೆ ಮಾಡುವಂತೆ ಬೆಸ್ಕಾಂ ಮನವಿ ಕೂಡ ಮಾಡಿದೆ. ಆದರೆ ಸದ್ಯ ಆರು ತಿಂಗಳಿಗೆ ಅನ್ವಯವಾಗುವಂತೆ ದರ ಏರಿಕೆಯಾಗುತ್ತಿದೆ. ಕಲ್ಲಿದ್ದಲಿನ ದರ ಏರಿಕೆಯಾದಾಗ ಈ ದರ ಏರಿಕೆ ಅನಿವಾರ್ಯ ಎನ್ನುವುದು ಬೆಸ್ಕಾಂ ಸ್ಪಷ್ಟನೆಯಾಗಿದೆ.

Leave A Reply