ಡಂಬಲ್ಸ್​​ ಎತ್ತಿಕೊಂಡು ಫೋಸ್ ಕೊಡುವ ಮೂಲಕ ಹೊಸ ಬಾಳಿಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟ ವಧು!

ಮದುವೆ ಎಂಬುದು ಪ್ರತಿಯೊಬ್ಬರ ಜೀವನದ ಮುಖ್ಯವಾದ ಘಟ್ಟ. ಆದ್ದರಿಂದ ಪ್ರತಿಯೊಂದು ಜೋಡಿಯೂ ತಮ್ಮ ವಿವಾಹ, ಜೀವನ ಪರಿಯಂತ ಪ್ರತಿಯೊಂದು ಹೆಜ್ಜೆಯೂ ನೆನಪು ಉಳಿಯುವಂತೆ ಇರಬೇಕೆಂದು ಬಯಸುತ್ತಾರೆ. ಹೀಗಾಗಿ ಜೋಡಿಗಳು ಎಲ್ಲಾ ರೀತಿಯ ಪ್ಲಾನ್ ಗಳನ್ನು ಮುಂಚಿತವಾಗಿ ಮಾಡುತ್ತಾರೆ. ಕೆಲವರಿಗೆ ಬಂದ ಅತಿಥಿಗಳಿಗೆ ಯಾವ ರೀತಿ ಉಪಚಾರ ನೀಡುವುದು ಎಂದಾದರೆ, ಇನ್ನೂ ಕೆಲವರಿಗೆ ತಮ್ಮ ಮದುವೆಯ ಡ್ರೆಸ್ಸಿಂಗ್, ಫೋಟೋಗ್ರಾಫರ್ ಬಗ್ಗೆ ಚಿಂತೆ. ಇವಾಗ ಅಂತೂ ಪ್ರಿ ವೆಡ್ಡಿಂಗ್ ಫೋಟೋ ಶೂಟ್, ಹಳದಿ, ಮೆಹಂದಿ ಹೀಗೆಲ್ಲ ವೆರೈಟಿ ಪ್ಲಾನಿಂಗ್ ಇದೆ.

ಅದರಲ್ಲೂ ಫೋಟೋ ಶೂಟ್ ಗೆ ಇತ್ತೀಚಿನ ಜೋಡಿಗಳು ಹೆಚ್ಚು ಒತ್ತು ನೀಡುತ್ತಿದ್ದಾರೆ. ಇತ್ತೀಚೆಗೆ ವಧು ಗುಂಡಿ ಬಿದ್ದ ರಸ್ತೆಯಲ್ಲಿ ಫೋಟೋ ಶೂಟ್ ಮಾಡಿಕೊಂಡಿದ್ದ ವೀಡಿಯೋ ವೈರಲ್ ಆಗಿತ್ತು. ಅದರಂತೆ ಇಲ್ಲೊಂದು ಕಡೆ ಮದುಮಗಳೊಬ್ಬಳು ಜಿಮ್​ನಲ್ಲಿ ವೆಡ್ಡಿಂಗ್ ಫೋಟೋ ಶೂಟ್ ಮಾಡಿಸಿಕೊಂಡಿದ್ದಾಳೆ. ಸದ್ಯ ಈ ಪೋಸ್ಟ್ ಸಕ್ಕತ್ ವೈರಲ್ ಆಗುತ್ತಿದೆ.


Ad Widget

Ad Widget

Ad Widget

Ad Widget

Ad Widget

Ad Widget

ಹೌದು. ಈಕೆ ಮದುವೆಯ ಕಾಂಜೀವರಂ ಸೀರೆಯುಟ್ಟು, ಅಲಂಕಾರ ಮಾಡಿಕೊಂಡು ಜಿಮ್​ನಲ್ಲಿ ಕಸರತ್ತು ನಡೆಸಿದ್ದಾಳೆ. 25 ಕೆ.ಜಿ ಡಂಬಲ್ಸ್​​ ಎತ್ತಿಕೊಂಡು ಫೋಟೋಗೆ ಫೋಸ್​ ಕೊಟ್ಟಿದ್ದಾಳೆ. ಈ ವೆಡ್ಡಿಂಗ್ ಫೋಟೋಶೂಟ್ ಮಾಡಿಸಿಕೊಂಡಿರುವ ವಧುವಿಗೆ ನೆಟ್ಟಿಗರು ಮೆಚ್ಚುಗೆ ನೀಡಿದ್ದಾರೆ. ಈಕೆ ಮಹಿಳೆಯರ ಶಕ್ತಿಯನ್ನು ಮತ್ತು ಸೌಂದರ್ಯವನ್ನು ಪ್ರತಿನಿಧಿಸುತ್ತಿದ್ದಾಳೆ ಎಂದು ಹೇಳಿದ್ದಾರೆ. ಸಿಕ್ಕಾಪಟ್ಟೆ ವೈರಲ್ ಆಗುತ್ತಿರುವ ಟ್ವಿಟರ್​​ ವೀಡಿಯೋವನ್ನು 17 ಸಾವಿರ ಜನರು ನೋಡಿದ್ದಾರೆ.

error: Content is protected !!
Scroll to Top
%d bloggers like this: