SSLC, PUC ಪರೀಕ್ಷಾ ಮಂಡಳಿಗಳ ವಿಲೀನಕ್ಕೆ ಅಸ್ತು : ಬಿ ಸಿ ನಾಗೇಶ್ ವಿಧೇಯಕ ಮಂಡನೆ

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಲೀನಕ್ಕೆ ಅವಕಾಶ ಕಲ್ಪಿಸುವ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ವಿಧೇಯಕ-2022 ವಿಧಾನಸಭೆಯಲ್ಲಿ ಅನುಮೋದನೆಗೊಂಡಿದೆ.

 

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ವಿಧೇಯಕ ಮಂಡಿಸಿದರು.

ನಂತರ ಮಾತನಾಡಿದ ಸಚಿವರು ರಾಷ್ಟ್ರೀಯ ಶಿಕ್ಷಣ ನೀರಿಗೆ ಅನುಕೂಲವಾಗುವಂತೆ ಮತ್ತು ಎರಡು ಮಂಡಳಿಗಳಲ್ಲಿ ಆಡಳಿತಾತ್ಮ ಹಾಗ ಶೈಕ್ಷಣಿಕ ಕಾರ್ಯಭಾರ ಕಡಿಮೆ ಮಾಡುವ ಉದ್ದೇಶದಿಂದ ವಿಲೀನಕ್ಕೆ ಒಪ್ಪಿಗೆ ನೀಡಲಾಗಿದೆ ಎಂದರು.

ಈ ಎರಡು ಮಂಡಳಿಯನ್ನು ಒಟ್ಟುಗೂಡಿಸಿ ಐಎಎಸ್ ಅಧಿಕಾರಿಯೊಬ್ಬರನ್ನು ನಿರ್ದೇಶಕರನ್ನಾಗಿ ಮಾಡಲಾಗುವುದು. ಅದೇ ರೀತಿ ಪರೀಕ್ಷಾ ವಿಧಾನದಲ್ಲಿ ಯಾವುದೇ ಬದಲಾವಣೆ ಮಾರ್ಪಡುಗಳಿರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷಾಮಂಡಳಿಗಳನ್ನು ವಿಲೀನಗೊಳಿಸಿ ಏಕರೂಪ ಪರೀಕ್ಷಾಮಂಡಳಿಯನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ.

Leave A Reply

Your email address will not be published.