ತಪ್ಪಲಿದೆಯೇ ಶಾಲಾ ಮಕ್ಕಳಿಗೆ ಬ್ಯಾಗ್ ಹೊರೆ! | ಮಕ್ಕಳ ಬ್ಯಾಗ್ ತೂಕ ಇಳಿಕೆ ಮಾಡಲು ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಕೆ

Share the Article

ಶಾಲಾ ಮಕ್ಕಳಿಗೆ ಹೆಚ್ಚಿನ ಹೊರೆ ಆಗುತ್ತಿರುವುದು ಬ್ಯಾಗ್ ನಿಂದಾಗಿ. ವಿದ್ಯಾರ್ಥಿಗಳ ತೂಕಕ್ಕಿಂತಲೂ ಹೆಚ್ಚು ಸ್ಕೂಲ್ ಬ್ಯಾಗ್ ಭಾರ ಇರುತ್ತದೆ. ಈ ಹಿತದೃಷ್ಟಿಯಿಂದ ಪ್ರಾಥಮಿಕ ಶಾಲಾ ಮಕ್ಕಳ ಬ್ಯಾಗ್ ತೂಕವನ್ನು ಇಳಿಕೆ ಮಾಡಲು ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಕೋರಿ ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಲಾಗಿದೆ.

ಶಾಲೆ ಆಡಳಿತಕ್ಕೆ ಸಂಬಂಧಿಸಿದಂತೆ ನಿಯಮ, ಕಾನೂನುಗಳ ಬಗ್ಗೆ ಸರ್ಕಾರ ಆಗಾಗ ಅಧಿಸೂಚನೆ, ಸುತ್ತೋಲೆ ಹೊರಡಿಸುತ್ತದೆ. ಆದರೆ, ಶಾಲಾ ಬ್ಯಾಗ್ ತೂಕಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ದಿಷ್ಟ ನಿಯಮವಿಲ್ಲ ಎಂದು ಹೇಳಲಾಗಿದೆ. 2006ರಲ್ಲಿ ರಾಜ್ಯಸಭೆಯಲ್ಲಿ ಶಾಲಾ ಮಕ್ಕಳ ಬ್ಯಾಗ್ ತೂಕ ಕಡಿಮೆ ಮಾಡುವ ಕುರಿತು ವಿಧೇಯಕ ಮಂಡಿಸಲಾಗಿತ್ತು. ಅದನ್ನು ಅಲ್ಲಿಗೆ ಕೈ ಬಿಡಲಾಗಿದೆ.

ಹೀಗಾಗಿ, ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತುಮಕೂರಿನ ವಕೀಲ ಎಲ್. ರಮೇಶ್ ನಾಯಕ್ ಅವರು ಸಲ್ಲಿಸಿದ್ದು, ವಿಚಾರಣೆಗೆ ಬರಬೇಕಿದೆ. ಹೆಚ್ಚಿನ ತೂಕದ ಬ್ಯಾಗ್ ನಿಂದಾಗಿ ಮಕ್ಕಳ ಆರೋಗ್ಯ ಮತ್ತು ಯೋಗಕ್ಷೇಮದ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು, ಶಾಲಾ ಮಕ್ಕಳ ಬ್ಯಾಗ್ ತೂಕ ಇಳಿಕೆ ಮಾಡಲು ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಕೇಂದ್ರ ಸರ್ಕಾರ ಶಾಲಾ ಬ್ಯಾಗ್ ನೀತಿ 2020 ರಲ್ಲಿ ಮಕ್ಕಳ ಬ್ಯಾಗ್ ತೂಕದ ಮಿತಿ ಇಷ್ಟೇ ಇರಬೇಕೆಂದು ನಿಯಮ ಜಾರಿ ಮಾಡಿದ್ದರೂ ಪಾಲನೆ ಆಗುತ್ತಿಲ್ಲ ಎನ್ನಲಾಗಿದೆ. ಈ ಮೂಲಕವಾದರೂ ಮಕ್ಕಳಿಗೆ ಬ್ಯಾಗ್ ಹೊರೆ ತಪ್ಪಲಿದೆಯೇ ನೋಡಬೇಕಾಗಿದೆ.

Leave A Reply

Your email address will not be published.