ಇನ್ಮುಂದೆ ಇಲ್ಲ ನೆಟ್ವರ್ಕ್ ಸಮಸ್ಯೆ – ಭಾರತದಲ್ಲೂ ಶುರು 5G ಸೇವೆ | ಅಕ್ಟೊಬರ್ 1ರಂದೇ ಚಾಲನೆ ನೀಡಲಿದ್ದಾರೆ ನರೇಂದ್ರ ಮೋದಿ

ಟೆಕ್ನಾಲಜಿ ಜಗತ್ತಿನಲ್ಲಿ ಅತೀ ಹೆಚ್ಚು ಕೇಳಿಬರುತ್ತಿರುವ ಪದವೆಂದರೆ “5G ನೆಟವರ್ಕ್”. ಅತೀ ವೇಗ ಓಡುತ್ತಿರುವ ಈ ನೆಟವರ್ಕ್ ಪ್ರಪಂಚದಲ್ಲಿ ಭಾರಿ ಸಂಚಲನವನ್ನೇ ಮೂಡಿಸುತ್ತಿದೆ. ಈ ಸೇವೆ ಯಾವಾಗ ಭಾರತಕ್ಕೆ ಬರಬಹುದೆಂದು ಕಾತುರದಿಂದ ಕಾಯುತ್ತಿರುವ ಜನರಿಗೆ ಉತ್ತರ ಸಿಕ್ಕಿದ ಸಂಭ್ರಮ.


Ad Widget

Ad Widget

Ad Widget

Ad Widget
Ad Widget

Ad Widget

ಹೌದು. ಪ್ರಧಾನಿ ನರೇಂದ್ರ ಮೋದಿಯವರು ಅಕ್ಟೊಬರ್ 1ರಂದು ನಡೆಯುವ ಇಂಡಿಯಾ ಮೊಬೈಲ್ ಕಾಂಗ್ರೆಸ್ ಕಾರ್ಯಕ್ರಮದಲ್ಲಿ 5G ಸೇವೆ ಚಾಲನೆ ನೀಡಲಿದ್ದಾರೆ. ಈ ಸೇವೆಯು ಮೊದಲಿಗೆ 13 ನಗರಗಳಲ್ಲಿ 5G ಸೇವೆ ಆರಂಭಗೊಂಡು ಕ್ರಮೇಣ ಗ್ರಾಮೀಣ ಪ್ರದೇಶದಲ್ಲಿಯೂ ಲಭ್ಯವಾಗಲಿದೆ.


Ad Widget

ಬಹುನಿರೀಕ್ಷಿತ 5ಜಿ ಸೇವೆ, ಇದೀಗ ಪ್ರಮುಖ ನಗರಗಳಿರುವ ಅಹಮದಾಬಾದ್, ಬೆಂಗಳೂರು, ಚಂಡೀಗಢ, ಚೆನ್ನೈ, ದೆಹಲಿ, ಗಾಂಧಿನಗರ, ಗುರುಗ್ರಾಮ್, ಹೈದರಾಬಾದ್, ಜಾಮ್‍ನಗರ, ಕೋಲ್ಕತ್ತಾ, ಲಕ್ನೋ, ಮುಂಬೈ ಮತ್ತು ಪುಣೆಯಲ್ಲಿ ಮೊದಲ ಹಂತದ 5ಜಿ ಸೇವೆ ಆರಂಭವಾಗಲಿದೆ. ಈ ನಗರಗಳಲ್ಲಿ ಆಯ್ದ ಕೆಲ ಪ್ರದೇಶಗಳಲ್ಲಿ ಜನರಿಗೆ 5ಜಿ ಸೇವೆ ದೊರಕುವ ಸಾಧ್ಯತೆ ಇದೆ.

ಭಾರತದ ದೊಡ್ಡಮಟ್ಟದ ಟೆಲಿಕಾಂ, ಮಾಧ್ಯಮ ಮತ್ತು ತಂತ್ರಜ್ಞಾನ ವೇದಿಕೆಯಾಗಿರುವ ಇಂಡಿಯಾ ಮೊಬೈಲ್ ಕಾಂಗ್ರೆಸ್ (IMC), ದೂರಸಂಪರ್ಕ ಇಲಾಖೆ (DoT) ಮತ್ತು ಸೆಲ್ಯುಲರ್ ಆಪರೇಟರ್ಸ್ ಅಸೋಸಿಯೇಷನ್ ​​ಆಫ್ ಇಂಡಿಯಾ (COAI) ಒಂದಾಗಿ ಈ ಕಾರ್ಯಕ್ರಮ ಆಯೋಜನೆ ಮಾಡುತ್ತಿದ್ದು, ಇದರಲ್ಲಿ 5ಜಿ ಲಾಂಚ್ ಆಗಲಿದೆ.

5G ಸೇವೆಯು ತಂತ್ರಜ್ಞಾನವು ಭಾರತಕ್ಕೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ ಎಂದು ತಜ್ಞರು ಹೇಳಿದ್ದಾರೆ. 2030 ರ ವೇಳೆಗೆ ಭಾರತದಲ್ಲಿ ಒಟ್ಟು ಸಂಪರ್ಕಗಳ ಮೂರನೇ ಒಂದು ಭಾಗಕ್ಕಿಂತ ಹೆಚ್ಚಿನದಾಗಿರುತ್ತದೆ ಎಂದು ಯೋಜಿಸಲಾಗಿದೆ , 2G ಮತ್ತು 3G ಯ ಪಾಲು ಶೇಕಡಾ 10 ಕ್ಕಿಂತ ಕಡಿಮೆಯಿರುತ್ತದೆ ಎಂದು GSMA (ಗ್ಲೋಬಲ್ ಸಿಸ್ಟಮ್ ಫಾರ್ ಮೊಬೈಲ್ ಕಮ್ಯುನಿಕೇಷನ್ಸ್) ವರದಿ ಹೇಳಿದೆ.

ಇದು 2023 ಮತ್ತು 2040 ರ ನಡುವೆ ಭಾರತೀಯ ಆರ್ಥಿಕತೆಗೆ ₹ 36.4 ಟ್ರಿಲಿಯನ್ ($455 ಶತಕೋಟಿ) ಪ್ರಯೋಜನವನ್ನು ನೀಡುವ ಸಾಧ್ಯತೆಯಿದೆ ಎಂದು ಮೊಬೈಲ್ ನೆಟ್‌ವರ್ಕ್ ಆಪರೇಟರ್‌ಗಳನ್ನು ಪ್ರತಿನಿಧಿಸುವ ಜಾಗತಿಕ ಉದ್ಯಮ ಸಂಸ್ಥೆಯು ಇತ್ತೀಚಿಗೆ ಮಾಹಿತಿ ನೀಡಿದೆ.

error: Content is protected !!
Scroll to Top
%d bloggers like this: