ಮನೆ ಬಾಗಿಲಿಗೆ ಬರಲಿದೆ ಉಚಿತ ಡಿಜಿಟಲ್ ವಿದ್ಯುತ್ ಮೀಟರ್!

ಬೆಂಗಳೂರು : ಬೆಸ್ಕಾಂ ಮನೆ ಮನೆಗೆ ತೆರಳಿ ಉಚಿತ ಡಿಜಿಟಲ್ ವಿದ್ಯುತ್ ಮೀಟರ್ ಅಳವಡಿಕೆಗೆ ಮುಂದಾಗಿದ್ದು, ಈ ಮೂಲಕ ಯಾಂತ್ರಿಕ ವಿದ್ಯುತ್ ಮೀಟರ್ ಗಳಿಗಿಂತ ಸುಧಾರಿತ ತಂತ್ರಜ್ಞಾನದತ್ತ ಹೆಜ್ಜೆ ಹಾಕಿದೆ.

 

ಗ್ರಾಹಕರಿಗೆ ಡಿಜಿಟಲ್ ವಿದ್ಯುತ್ ಮೀಟರ್ ಗಳನ್ನು ಉಚಿತವಾಗಿ ಮನೆ ಬಾಗಿಲಿಗೆ ಅಳವಡಿಸಲು ಬೆಸ್ಕಾಂ ಮುಂದಾಗಿದೆ. ಈ ಡಿಜಿಟಲ್ ವಿದ್ಯುತ್ ಮೀಟರ್ ಅಳವಡಿಕೆಗೆ ಗ್ರಾಹಕರು ಯಾವುದೇ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ ಎಂದು ತಿಳಿಸಿದೆ.

ಈ ಡಿಜಿಟಲ್ ವಿದ್ಯುತ್ ಮೀಟರ್ ಗೆ ಯಾವುದೇ ಅರ್ಜಿ ಸಲ್ಲಿಸುವ ಅವಶ್ಯಕತೆಯೂ ಇರುವುದಿಲ್ಲ.ಈಗಾಗಲೇ ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ 1,57,379 ಡಿಜಿಟಲ್ ಮೀಟರ್ ಗಳನ್ನು ಅಳವಡಿಸಲಾಗಿದೆ ಎಂದು ಬೆಸ್ಕಾಂ ತಿಳಿಸಿದೆ.

Leave A Reply

Your email address will not be published.