AHVS Recruitment: ರಾಜ್ಯ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿ ಭರ್ಜರಿ ಉದ್ಯೋಗವಕಾಶ | ವೇತನ ಶ್ರೇಣಿ ರೂ.21,400 ರಿಂದ 42,000

ರಾಜ್ಯ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಿ.

 

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 05-10-2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 04-11-2022
ಶುಲ್ಕವನ್ನು ಪಾವತಿಸಲು ಕೊನೆ ದಿನಾಂಕ: 06-10-2022

ನೇಮಕಾತಿ ಇಲಾಖೆ : ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ
ಹುದ್ದೆ ಹೆಸರು : ಕಿರಿಯ ಪಶುವೈದ್ಯಕೀಯ ಪರೀಕ್ಷಕರು (ಪಶು ವೈದ್ಯಕೀಯ ಸಹಾಯಕರು)
ಹುದ್ದೆಗಳ ಸಂಖ್ಯೆ : 250
ವಿದ್ಯಾರ್ಹತೆ : ಪಶು ಆರೋಗ್ಯ (ಪಶುಸಂಗೋಪನೆ) ಡಿಪ್ಲೊಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ನಿರ್ದೇಶಕರು ವೃತ್ತಿ ಶಿಕ್ಷಣ, ಕರ್ನಾಟಕ ಸರ್ಕಾರವು ನಡೆಸಲಾದ ಡೈರಿ / ಪೌಲ್ಟ್ರಿಗೆ ಸಂಬಂಧಿಸಿದ ಎರಡು ವರ್ಷಗಳ ಉದ್ಯೋಗ ಆಧಾರಿತ ಕೋರ್ಸ್‌ (ಜೆ.ಒ.ಸಿ ಡೈರಿ / (ಪೌಲ್ಟ್ರಿ) (ಕುಕ್ಕುಟ) ರಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ : ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಪೂರೈಸಿರಬೇಕು. ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ, ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ಮೀರಿರಬಾರದು.

ಅರ್ಜಿ ಶುಲ್ಕ : ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ರೂ.750. ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.750. ಎಸ್‌ಸಿ / ಎಸ್‌ಟಿ / ಪ್ರವರ್ಗ-1 / ವಿಶೇಷ ಚೇತನ ಅಭ್ಯರ್ಥಿಗಳಿಗೆ ರೂ.500.

ವೇತನ ಶ್ರೇಣಿ: ರೂ.21,400 – 42,000.

ನೇಮಕಾತಿ ವಿಧಾನ : ನೇರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುತ್ತದೆ.
ಸ್ಪರ್ಧಾತ್ಮಕ ಪರೀಕ್ಷೆ : 100 ಅಂಕಗಳಿಗೆ 100 ಪ್ರಶ್ನೆಗಳ ಒಂದು ಲಿಖಿತ ಪ್ರಶ್ನೆ ಪತ್ರಿಕೆ ಇರುತ್ತದೆ. ವಸ್ತುನಿಷ್ಠ ಬಹು ಆಯ್ಕೆ ಮಾದರಿಯಲ್ಲಿ ಇರುತ್ತದೆ. ತಪ್ಪು ಉತ್ತರಕ್ಕೆ 1/4 ಅಂಕಗಳನ್ನು ಕಳೆಯಲಾಗುತ್ತದೆ.

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಯಾವುದೇ ತೊಂದರೆ ಆದಲ್ಲಿ ಸಹಾಯವಾಣಿ ಸಂಖ್ಯೆ 080-23460460 ಗೆ ಸಂಪರ್ಕಿಸಬಹುದು.

ಅರ್ಜಿ ಸಲ್ಲಿಕೆಗೆ ಲಿಂಕ್‌ ನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಸೆಪ್ಟೆಂಬರ್ 26 ರಂದು ಬಿಡುಗಡೆ ಮಾಡಲಾಗುತ್ತದೆ. ಇತರೆ ಹೆಚ್ಚಿನ ಮಾಹಿತಿಗಳಿಗಾಗಿ ಕೆಳಗಿನ ನೋಟಿಫಿಕೇಶನ್‌ ಲಿಂಕ್‌ ಅನ್ನು ಕ್ಲಿಕ್ ಮಾಡಿ ಓದಿರಿ.

Leave A Reply

Your email address will not be published.