ಪುತ್ತೂರು: ಅಕ್ರಮ ಜಾನುವಾರು ಸಾಗಾಟ ಪತ್ತೆ| ಓರ್ವ ವಶಕ್ಕೆ

Share the Article

ಪುತ್ತೂರು: ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ರಕ್ಷಣೆ ಮಾಡಿ ಓರ್ವನನ್ನು ವಶಕ್ಕೆ ಪಡೆದ ಘಟನೆ ಸೆ.25 ರಂದು ಮುಂಜಾನೆ ಮುರ ರೈಲ್ವೇ ಬ್ರಿಡ್ಜ್ ಸಮೀಪ ನಡೆದಿದೆ.

ಪುತ್ತೂರು ನಗರ ಠಾಣಾ ಪಿಎಸ್‌ಐ ಶ್ರೀಕಾಂತ್ ರಾಥೋಡ್ ಮತ್ತು ಸಿಬ್ಬಂದಿಗಳು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿರುವುದನ್ನು ಗಮನಿಸಿ ವಿಚಾರಣೆ ನಡೆಸಿ, ಓರ್ವನನ್ನು ವಶಕ್ಕೆ ಪಡೆದಿದ್ದು, ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ.

ಕಾರ್ಯಾಚರಣೆಯಲ್ಲಿ ಪುತ್ತೂರು ನಗರ ಠಾಣೆಯ ಪೊಲೀಸ್ ನಿರೀಕ್ಷಕರಾದ ಸುನೀಲ್ ಕುಮಾರ್, ಪಿಎಸ್ಐ ಶ್ರೀಕಾಂತ್ ರಾಥೋಡ್ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

Leave A Reply