ಸರಕಾರಿ ನೌಕರರಿಗೆ ಗುಡ್ ನ್ಯೂಸ್ | ಶೀಘ್ರದಲ್ಲೇ ಸ್ಮಾರ್ಟ್ ಕ್ಯಾಂಟೀನ್ ಆರಂಭ

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಶಿವಮೊಗ್ಗದ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಕಚೇರಿ ಹಿಂಭಾಗದಲ್ಲಿ ಸ್ಮಾರ್ಟ್ ಕ್ಯಾಂಟೀನ್ ಆರಂಭವಾಗಲಿದ್ದು, ಶೇಕಡ 20 ರಿಂದ 50ರ ರಿಯಾಯಿತಿ ದರದಲ್ಲಿ 500ಕ್ಕೂ ಹೆಚ್ಚು ದಿನ ಬಳಕೆ ವಸ್ತುಗಳು ಇಲ್ಲಿ ಲಭ್ಯವಾಗಲಿವೆ.

 

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ಶನಿವಾರದಂದು ಶಿವಮೊಗ್ಗದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂದರ್ಭದಲ್ಲಿ ಈ ಮಾಹಿತಿ ನೀಡಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯದಲ್ಲಿ ಎ ಪ್ಲಸ್ ಗ್ರೇಡ್ ಹೊಂದಿದ್ದು, ಐದನೇ ಬಡಾವಣೆಯನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದ ಅವರು, ಅಲ್ಲದೆ ಆರೋಗ್ಯ ಸಂಜೀವಿನಿ ಯೋಜನೆ ಶೀಘ್ರದಲ್ಲೇ ಜಾರಿಯಾಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಪ್ರಕ್ರಿಯೆಗಳು ಈಗಾಗಲೇ ಆರಂಭವಾಗಿವೆ ಎಂದು ತಿಳಿಸಿದರು.

Leave A Reply

Your email address will not be published.