ದೇಶದಾದ್ಯಂತ PFI ಕಚೇರಿ ಮೇಲೆ ದಾಳಿ, ಮುಖಂಡರ ಬಂಧನದ ಬೆನ್ನಲ್ಲೇ ಮತ್ತೊಂದು ಬಿಗ್ ಶಾಕ್!!!
ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದೇಶದ ವಿವಿಧ ರಾಜ್ಯದಲ್ಲಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಭಾರತದಾದ್ಯಂತ ED, NIA ಮತ್ತು ರಾಜ್ಯ ಪೊಲೀಸ್ ಪಡೆಗಳು ಜಂಟಿಯಾಗಿ ಪಿಎಫ್‌ಐ ಕಚೇರಿ, ನಾಯಕ ನಿವಾಸಗಳ ಮೇಲೆ ಸಂಘಟಿತ ಶೋಧಗಳನ್ನು ನಡೆಸಿದ್ದಾರೆ.
ಕೇರಳ, ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಉತ್ತರ ಪ್ರದೇಶ, ರಾಜಸ್ಥಾನ, ದೆಹಲಿ, ಅಸ್ಸಾಂ, ಮಧ್ಯಪ್ರದೇಶ, ಮಹಾರಾಷ್ಟ್ರ, ಗೋವಾ, ಪಶ್ಚಿಮ ಬಂಗಾಳ, ಬಿಹಾರ ಮತ್ತು ಮಣಿಪುರ ಸೇರಿದಂತೆ ಭಾರತದ 15 ರಾಜ್ಯಗಳ 93 ಸ್ಥಳಗಳಲ್ಲಿ ಎನ್‌ಐಎ ಶೋಧ ನಡೆಸಿ 45 ಆರೋಪಿಗಳನ್ನು ಬಂಧಿಸಿದ್ದಾರೆ.
ದೇಶದಲ್ಲಿ ಭಯೋತ್ಪಾದನೆಗೆ ಧನಸಹಾಯ, ಅಕ್ರಮ ಶಸ್ತ್ರಾಸ್ತ್ರ ತರಬೇತಿ ಶಿಬಿರಗಳ ಆಯೋಜನೆ ಮತ್ತು ನಿಷೇಧಿತ ಸಂಘಟನೆಯನ್ನು ಸೇರಲು ಜನರಿಗೆ ಪ್ರಚೋದನ ನೀಡುತ್ತಿರುವ ಗಂಭೀರ ಆರೋಪದ ಮಾಹಿತಿ ಲಭ್ಯವಾಗಿರುವ ಬೆನ್ನಲ್ಲೇ ಈ ಬೃಹತ್ ಕಾರ್ಯಾಚರಣೆ ನಡೆಸಲಾಗಿದೆ.
ಪಿಎಫ್‌ಐ ಸಂಘಟನೆ ಉಗ್ರವಾದಕ್ಕೆ ಬೆಂಬಲ ನೀಡುತ್ತಿರುವ ಕುರಿತು ಸಂಗ್ರಹಿಸಿದ ಸಾಕ್ಷ್ಯಗಳ ಆಧಾರದಲ್ಲಿ ಪಿಎಫ್‌ಐ ನಿಷೇಧಿಸಲು ಕೇಂದ್ರ ಗೃಹ ಸಚಿವಾಲಯ ಚಿಂತನೆ ನಡೆಸಿ, ಪಿಎಫ್ಐ ಕಚೇರಿ ಮತ್ತು ನಾಯಕರ ನಿವಾಸದ ಮೇಲೆ ದಾಳಿಯನ್ನು ನಡೆಸಲಾಗಿದೆ.
ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಈ ಬಗ್ಗೆ ಮಹತ್ವದ ಸಭೆ ನಡೆಸಲಿದ್ದು, ಪಿಎಫ್‌ಐ ನಿಷೇಧದ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಪಿಎಫ್‌ಐ ನಿಷೇಧಕ್ಕೆ ಕಾನೂನು ಸಲಹೆ ಪಡೆದು ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಲಾಗಿದೆ.