ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ : ತುರ್ತು ಭೂಸ್ಪರ್ಶ,135 ಪ್ರಯಾಣಿಕರಿದ್ದ ವಿಮಾನ

ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನ ಟೇಕಾಫ್ ಆದ ಕೆಲವೇ ಕ್ಷಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಟೇಕಾಫ್ ಆದ ಕೂಡಲೇ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿಯಾಗಿದೆ‌. ಪರಿಣಾಮ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದ್ದು,ವಿಮಾನದಲ್ಲಿ 135 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.

ಸಿಬ್ಬಂದಿ ಹಾಗೂ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಕ್ಕಿ ಡಿಕ್ಕಿ ಹೊಡೆದ ಕಾರಣ ತಪಾಸಣೆ ಮತ್ತು ನಿರ್ವಹಣೆಗಾಗಿ ವಿಮಾನವನ್ನು ಇಳಿಸಲಾಗಿದೆ.

ವಿದೇಶಗಳಿಗೆ ತೆರಳುತ್ತಿದ್ದ ಪ್ರಯಾಣಿಕರಿಗೆ ಬೇರೆ ವಿಮಾನದಲ್ಲಿ ತೆರಳಲು ಅವಕಾಶ ಕಲ್ಪಿಸಲಾಯಿತು.

Leave A Reply