KEA ಯಿಂದ ಮುಖ್ಯವಾದ ಮಾಹಿತಿ ಪ್ರಕಟ : ಡಿಪ್ಲೋಮಾ ಸಿಇಟಿ 2022 ಅರ್ಜಿ ಆಹ್ವಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದೆ. ಡಿಪ್ಲೋಮಾ ಸಾಧಾರಕರಿಗೆ 2022-23 ನೇ ಸಾಲಿನ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಡಿಪ್ಲೋಮಾ ಸಾಮಾನ್ಯ ಪ್ರವೇಶ ಪರೀಕ್ಷೆ(ಡಿಸಿಇಟಿ-2022) ಬಗ್ಗೆ ಮುಖ್ಯವಾದ ಮಾಹಿತಿಯನ್ನು ನೀಡಿದೆ. ಸರ್ಕಾರದ ಆದೇಶದ ಅನ್ವಯ 2022-23ನೇ ಸಾಲಿಗೆ ಪ್ರಾಧಿಕಾರವು ಹಗಲು ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶಾತಿಗೆ ಅರ್ಹ ಡಿಪ್ಲೊಮ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಈ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಹತೆ ಪಡೆಯಲು, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ 2022ರ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಹಾಜರಾಗಬೇಕು.
ಡಿಪ್ಲೊಮ ವ್ಯಾಸಂಗ ಮಾಡಿರುವ ಅಭ್ಯರ್ಥಿಗಳಿಗೆ ಇಂಜಿನಿಯರಿಂಗ್ ಪದವಿ ಪ್ರವೇಶಕ್ಕೆ (ಲ್ಯಾಟರಲ್ ಎಂಟ್ರಿ) ನಡೆಸಲಾಗುವ ಪ್ರವೇಶ ಪರೀಕ್ಷೆ’ಡಿಸಿಇಟಿ-2022 ಯಲ್ಲಿ ಕೆಲವು ಮಹತ್ವದ ಬದಲಾವಣೆಯನ್ನು ತರಲಾಗಿದೆ. ಸರ್ಕಾರದ ಸೂಚನೆಯಂತೆ ಈ ಬದಲಾವಣೆಯನ್ನು ತರಲಾಗಿದ್ದು, ಇನ್ನು ಮುಂದೆ ಪ್ರವೇಶ ಪರೀಕ್ಷೆ ಅಂಕಗಳನ್ನು 180 ರಿಂದ 100 ಕ್ಕೆ ಇಳಿಸಲಾಗುತ್ತದೆ, ಡಿಪ್ಲೋಮಾ ವ್ಯಾಸಂಗಕ್ಕೆಆಪ್ಲೈಡ್ ವಿಜ್ಞಾನ ಮತ್ತು ಗಣಿತ ವಿಷಯಗಳನ್ನು ಮಾತ್ರ ಪರಿಗಣಿಸಿ ಎಲ್ಲಾ ಕೋರ್ಸ್‌ಗಳಿಗೆ ಅನ್ವಯವಾಗುವಂತೆ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಕೆಇಎ ತಿಳಿಸಿದೆ.

ಪ್ರಮುಖ ದಿನಾಂಕಗಳು
ಡಿಸಿಇಟಿ-2022 ಆನ್‌ಲೈನ್ ಅರ್ಜಿ ಭರ್ತಿ ಮಾಡಲು ಆರಂಭ ದಿನಾಂಕ- 27-09-2022.
ನೋಂದಣಿ ಹಾಗು ಶುಲ್ಕವನ್ನು ಪಾವತಿಸಲು – 07-10-2022.
ಆನ್‌ಲೈನ್ ಅರ್ಜಿ ಭರ್ತಿ ಮಾಡಲು ಕೊನೆಯ ದಿನಾಂಕ- 07-10-2022.

ಮೂರು ವರ್ಷಗಳ ಡಿಪ್ಲೋಮಾ ಇಂಜಿನಿಯರಿಂಗ್ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡಿ ಅರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್‌ನ ಇಂಜಿನಿಯರಿಂಗ್ ಕೋರ್ಸ್‌ಗಳಿಗೆ ನೇರವಾಗಿ ಯಾವುದೇ ಇಂಜಿನಿಯರಿಂಗ್ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ.

ಆನ್ಲೈನ್ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಡಿಪ್ಲೋಮಾ ಸಿಇಟಿ-2022ಕ್ಕೆ ದಾಖಲಿಸಿದ ಎಲ್ಲಾ ಮಾಹಿತಿಗಳನ್ನು ಅಂತಿಮ ಎಂದು ಪರಿಗಣಿಸಲಾಗುತ್ತದೆ. ಹಾಗೂ ಈ ಮಾಹಿತಿಯೇ ಮುಂದಿನ ಎಲ್ಲಾ ಪ್ರಕ್ರಿಯೆಗಳಿಗೆ  ನೀಡಲಾಗುತ್ತದೆ. ಹಾಗಾಗಿ ಯಾವುದೇ ಕಾರಣಕ್ಕೂ ದಾಖಲಿಸಿದ ಮಾಹಿತಿಯನ್ನು ಬದಲಾಯಿಸಲು ಸಾಧ್ಯತೆ ಕಡಿಮೆ. ಅಂದರೆ ಅವಕಾಶವಿಲ್ಲ ಎಂದರ್ಥ.

ಡಿಪ್ಲೊಮ ಸಿಇಟಿ -2022 ರ ಅರ್ಜಿ ನಮೂನೆಯಲ್ಲಿ ಜಾತಿ / ವರ್ಗ ಮತ್ತು ವಾರ್ಷಿಕ ಆಧಾಯದ ಬಗ್ಗೆ ಒದಗಿಸಿರುವ ಮಾಹಿತಿಯು ವಿದ್ಯಾರ್ಥಿಗಳಿಗೆ ರ‌್ಯಾಂಕ್ ನೀಡುವುದಕ್ಕೆ/ ಸೀಟು ಆಯ್ಕೆ ಮಾಡುವುದಕ್ಕೆ ಪರಿಗಣಿಸಲಾಗುವುದು ಮತ್ತು ಯಾವುದೇ ಕಾರಣಕ್ಕೂ ಬದಲಾಯಿಸಲು ಅವಕಾಶವಿರುವುದಿಲ್ಲ.
ಜಾತಿ, ವರ್ಗ ಮತ್ತು ಕಲ್ಯಾಣ ಕರ್ನಾಟಕದ ಮೀಸಲಾತಿ ಕೋರಲು ಇಚ್ಚಿಸುವ ಅರ್ಹ ಅಭ್ಯರ್ಥಿಗಳು ತಮ್ಮ ಆನ್‌ಲೈನ್‌ ಅರ್ಜಿ ನಮೂನೆಯಲ್ಲಿ ತಪ್ಪದೆ ಆರ್‌ಡಿ ಸಂಖ್ಯೆಯನ್ನು ನಮೂದಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

Leave A Reply

Your email address will not be published.