BREAKING NEWS | ದೇಶದಲ್ಲಿ 5 ವರ್ಷ PFI ಸೇರಿ ಹಲವು ಸಂಘಟನೆ ಬ್ಯಾನ್ : ಕೇಂದ್ರ ಸರ್ಕಾರ ಮಹತ್ವದ ಆದೇಶ
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೊಡ್ಡ ನಿರ್ಧಾರ ಒಂದಕ್ಕೆ ಬಂದಿದೆ. ದೇಶದಲ್ಲಿ ಮತೀಯ ಸಂಘರ್ಷ ಮೂಡಿಸುವ ಮತ್ತು ದೇಶಕ್ಕೆ ದೇಶದ ಭದ್ರತೆಗೆ ಅಪಾಯ ಅಂತ ಕಂಡುಬಂದ PFI ಸಹಿತ ಹಲವು ಸಂಘಟನೆಗಳ ಮೇಲೆ ನಿಷೇಧ ಝಳಪಿಸಿದೆ ಕೇಂದ್ರ ಸರ್ಕಾರ.
ದೇಶಾದ್ಯಂತ ಎನ್ ಐಎ ದಾಳಿ ಬೆನ್ನಲ್ಲೇ ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದ್ದು, ಕೇಂದ್ರ ಸರ್ಕಾರವು ಪಿಎಫ್‌ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ.
ಕಾನೂನುಬಾಹಿರ ಚಟುವಟಿಕೆಗಳ ಕಾಯಿದೆ (ಯುಎಪಿಎ) ಅಡಿಯಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಪಿಎಫ್‌ಐ ಮತ್ತು ಅದರ ಅಂಗ ಸಂಸ್ಥೆಗಳು ಕಾನೂನುಬಾಹಿರ ಸಂಘ ಎಂದು ಘೋಷಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿದೆ. ಪಿಎಫ್‌ಐ ಅಂಗಸಂಸ್ಥೆಗಳಾದ ರಿಹಬ್ ಇಂಡಿಯಾ ಫೌಂಡೇಶನ್ (ಆರ್ ಐಎಫ್), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್‌ಐ), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (ಎಐಐಸಿ), ನ್ಯಾಷನಲ್ ಕಾನ್ನೆಡರೇಶನ್ ಆಫ್ ಹೂಮನ್ ರೈಟ್ಸ್ ಆರ್ಗನೈಸೇಶನ್ (ಎನ್ ಸಿಎಚ್ ಆರ್ ಒ), ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರೆಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರಿಹ್ಯಾಬ್ ಫೌಂಡೇಶನ್ ಕೇರಳವನ್ನು ನಿಷೇಧಿಸಲಾಗಿದೆ.
ಬ್ಯಾನ್ ಆದ ಇತರ ಸಂಸ್ಥೆಗಳು:
ಪಿಎಫ್‌ಐ ಅಂಗಸಂಸ್ಥೆಗಳಾದ ರಿಹಬ್ ಇಂಡಿಯಾ ಫೌಂಡೇಶನ್ (ಆರ್ ಐಎಫ್), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್‌ಐ), ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (ಎಐಐಸಿ), ನ್ಯಾಷನಲ್ ಕಾನ್ನೆಡರೇಶನ್ ಆಫ್ ಹೂಮನ್ ರೈಟ್ಸ್ ಆರ್ಗನೈಸೇಶನ್ (ಎನ್ ಸಿಎಚ್ ಆರ್ ಒ), ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರೆಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರಿಹ್ಯಾಬ್ ಫೌಂಡೇಶನ್ ಕೇರಳವನ್ನು ನಿಷೇಧಿಸಲಾಗಿದೆ.
*PFI & its associates incl Rehab India Foundation(RIF), Campus Front of India(CFI), All India Imams Council(AIIC), National Confederation of Human Rights Org(NCHRO), National Women’s Front, Jr Front, Empower India Foundation &Rehab Foundation, Kerala declared unlawful associations.
ಕರ್ನಾಟಕದ ಮಟ್ಟಿಗೆ ಹೇಳುವುದಾದರೆ ಪ್ರವೀಣ್ ನೆಟ್ಟಾರ್ ನ ಹತ್ಯೆಯ ನಂತರ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಪ್ರವೀಣ್ ನೆಟ್ಟಾರ್ ಕೊಲೆಯ ನಂತರದ ಬೆಳವಣಿಗೆಗಳಲ್ಲಿ ದೇಶದ್ರೋಹಿ ಸಂಘಟನೆಗಳ ನಿಷೇಧಕ್ಕೆ ಒತ್ತಡ ಕೇಳಿಬಂದಿತ್ತು. PFI ಮತ್ತು SDPI ಮೇಲೆ ನಿಷೇಧ ಹೇರಲು ಜನಾಕ್ರೋಶ ವ್ಯಾಪಕ ಒತ್ತಡವಾಗಿ ಮೂಡಿತ್ತು. ಈಗ PFI ಮತ್ತದರ ಸಹವರ್ತಿ ಸಂಸ್ಥೆಗಳ ನಿಷೇಧ ಆಗಿದೆ.