ಪ್ರವೀಣ್ ನೆಟ್ಟಾರ್ ಪತ್ನಿಗೆ ಗ್ರೂಪ್ ಸಿ ಹುದ್ದೆ ನೀಡಿ ಆದೇಶ | ಆಕೆಗೆ ಸಿಗುವ ಹುದ್ದೆ ಏನು, ಸಿಗೋ ಸಂಬಳ ಎಷ್ಟು ಗೊತ್ತಾ ?
ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು (Praveen Nettar) ಪತ್ನಿಗೆ ಸಿಎಂ ಸಚಿವಾಲಯದಲ್ಲಿ ಗ್ರೂಪ್ ಸಿ ಹುದ್ದೆ ನೀಡಲು ಸಿಎಂ ಕಚೇರಿ ಆದೇಶ ಹೊರಡಿಸಿದೆ. ತಾತ್ಕಾಲಿಕ ಸಿ ಗ್ರೇಡ್ ಹುದ್ದೆ ನೀಡಿ ಸರಕಾರ ಆದೇಶ ಹೊರಡಿಸಿದೆ.
ಇತ್ತೀಚೆಗೆ ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ತಮ್ಮ ಕಚೇರಿಯಲ್ಲಿ ಕೆಲಸ ನೀಡುವುದಾಗಿ ಭರವಸೆ ನೀಡಿದ್ದರು. ಆ ಪ್ರಕಾರವಾಗಿಯೇ ಇಂದು ಪ್ರವೀಣ್ ನೆಟ್ಟಾರು ಪತ್ನಿ ನೂತನಾಗೆ ಸರ್ಕಾರಿ ನೌಕರಿಯನ್ನು ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಜುಲೈ 26 ರಂದು ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು.
ಈ ಸಾವು ರಾಜ್ಯದಲ್ಲಿದೆ ಸಂಚಲವನ್ನು ಸೃಷ್ಟಿ ಮಾಡಿತ್ತು ಘಟನೆಯನ್ನು ಖಂಡಿಸಿ ಸಾಲು ಸಾಲು ಬಿಜೆಪಿ ಕಾರ್ಯಕರ್ತರು ರಾಜೀನಾಮೆ ನೀಡಿದ್ದರು. ಅದು ಬಿಜೆಪಿ ಸರ್ಕಾರದ ಮೇಲೆ ತೀವ್ರ ಒತ್ತಡವನ್ನು ಉಂಟು ಮಾಡಿತ್ತು. ದೇಶಾದ್ಯಂತ ಚರ್ಚೆಗೆ ದಾರಿಯಾಗಿತ್ತು. ನೆಟ್ಟಾರು ಹತ್ಯೆಯಿಂದ ದಕ್ಷಿಣ ಕನ್ನಡ ಮಾತ್ರವಲ್ಲ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲೂ ಕ್ಷೋಭೆ ಭುಗಿಲೆದ್ದಿತ್ತು, ತನಿಖೆಯಲ್ಲಿ ಸರ್ಕಾರ ವಿಫಲವಾಗಿದೆ. ಕಾರ್ಯಕರ್ತರ ಹಿತ ಕಾಯಲು ಪಕ್ಷ ವಿಫಲವಾಗಿದೆ ಎಂದು ಆರೋಪಿಸಿ ಹಲವಾರು ಬಿಜೆಪಿ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದರು. ಇದರಿಂದಾಗಿ ಪಕ್ಷ ಹಾಗೂ ಸರ್ಕಾರವು ಮುಜುಗರ ಅನುಭವಿಸಬೇಕಾದ ಪರಿಸ್ಥಿತಿಯೂ ಉಂಟಾಗಿತ್ತು.
ಈಗ ತತ್ಕಾಲಿಕ ಹುದ್ದೆಗೆ ಆದೇಶ ಹೊರಡಿಸಿದ್ದು ಪ್ರವೀಣ್ ನೆಟ್ಟ ಪತ್ನಿ ನೂತನ ಕುಮಾರಿ ಅವರಿಗೆ ಸಿ ಗ್ರೇಡ್ ಹುದ್ದೆ ಲಭಿಸಿದೆ. ಆಕೆಗೆ ಬೇಸಿಕ್ ಸಂಬಳ 18,200 ರಷ್ಟು ಇರಲಿದ್ದು, ಇತರ ಸಂಬಳದ ಕಾಂಪೋನೆಂಟುಗಳು ಸೇರಿ ಒಟ್ಟು ಸಂಬಳ 30250 ನ ಮೇಲೆ ಇರಲಿದೆ. ಕ್ಲಕ್ಕುಗಳು, ಸ್ಟೆನೋಗ್ರಾಫರ್ ಗಳು, ಕೆಮಿಸ್ಟ್ ಗಳು, ಆಫೀಸ್ ಅಸಿಸ್ಟೆಂಟ್ಗಳು, ಟೆಲಿಫೋನ್ ಆಪರೇಟ್ರುಗಳು, ಪ್ರೈಮರಿ ಟೀಚರ್ ಗಳು, ಕಾನ್ಸ್ಟೇಬಲ್ ಗಳು ಮುಂತಾದವರುಗಳು ಸಿ ಗ್ರೇಡ್ ಕೆಟಗರಿಯ ಕೆಳಗಡೆ ಬರುತ್ತಾರೆ. ಪ್ರವೀಣ್ ನೆಟ್ಟರವರ ಪತ್ನಿ, ನೂತನ ಕುಮಾರಿಯವರಿಗೆ ಕ್ಲರ್ಕ್ ಹುದ್ದೆ ನೀಡಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.