ಗಮನಿಸಿ : ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ಇಂದಿನಿಂದ ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯ ಸರ್ಕಾರಿ ಪದವಿ ಕಾಲೇಜುಗಳಿಗೆ ಅಕ್ಟೋಬರ್ 1 ರಿಂದ 9 ರವರೆಗೆ ರಜೆ ಘೋಷಿಸಲಾಗಿದೆ.

 

ಪ್ರಾಧ್ಯಾಪಕರ ಸಂಘದ ಮನವಿ ಪರಿಗಣಿಸಿ ಅಕ್ಟೋಬರ್ 1 ರಿಂದ ಅಕ್ಟೋಬರ್ 9 ರವರೆಗೆ ರಜೆ ನೀಡಿರುವ ಕಾಲೇಜು ಶಿಕ್ಷಣ ಇಲಾಖೆಯು, ಶೈಕ್ಷಣಿಕ ಕಾರ್ಯಗಳನ್ನು ಅನುಷ್ಠಾನಗೊಳಿಸುವುದಕ್ಕೆ ಯಾವುದೇ ತೊಂದರೆಯಾಗದಂತೆ ಮತ್ತು ಸಂಬಂಧಪಟ್ಟ ವಿಶ್ವವಿದ್ಯಾಲಯ ಶೈಕ್ಷಣಿಕ ವೇಳಾಪಟ್ಟಿ, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮ ವಹಿಸಲು ಸೂಚಿಸಲಾಗಿದೆ.

Leave A Reply

Your email address will not be published.