ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ: ವಿವಿಧ ಯೋಜನೆಗಳಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ | ಹೆಚ್ಚಿನ ಮಾಹಿತಿ ಇಲ್ಲಿದೆ|
ಬಳ್ಳಾರಿ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ವಿಜಯಕುಮಾರ್ ಅವರು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2022-23 ನೇ ಸಾಲಿನಲ್ಲಿ ಧನಶ್ರೀ ಯೋಜನೆ, ಚೇತನಾ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಉದ್ಯೋಗಿನಿ ಯೋಜನೆಯ ಅನುಷ್ಠಾನಕ್ಕೆ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ಸಹಾಯಧನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 07 ಆಗಿರುತ್ತದೆ.
ಅರ್ಹತೆಗಳು : ವಯೋಮಿತಿ 18 ವರ್ಷ ಮೇಲ್ಪಟ್ಟಿರಬೇಕು. ಸದರಿ ಯೋಜನೆಗಳ ಪುನರ್ವಸತಿಗಾಗಿ ಜಿಲ್ಲಾಮಟ್ಟದಲ್ಲಿ ಅಧಿಕೃತವಾಗಿ ಗುರುತಿಸಿರುವ ಸಂಸ್ಥೆಯಿಂದ ಅಧಿಕೃತ ದೃಢೀಕರಣ ಪತ್ರ ಸಲ್ಲಿಸಬೇಕು. ಸಹಾಯಧನಕ್ಕಾಗಿ ನೀಡುವ ಅರ್ಜಿಯಲ್ಲಿ ಅಧಿಕೃತ ನಿವಾಸದ ವಿಳಾಸದ ಮತದಾರರ ಗುರುತಿನ ಚೀಟಿ, ಆಧಾರ ಕಾರ್ಡ, ಪಡಿತರ ಚೀಟಿ ಯಾವುದಾದರೊಂದು ದಾಖಲೆಯ ಪ್ರತಿಯನ್ನು ಸಲ್ಲಿಸುವುದು.
ಕಡ್ಡಾಯವಾಗಿ ವಯಸ್ಸು ದೃಢೀಕರಣ ಪತ್ರವನ್ನು ಲಗತ್ತಿಸುವುದು. ಬ್ಯಾಂಕ್‌ನಲ್ಲಿ ಕಡ್ಡಾಯವಾಗಿ ಖಾತೆಯನ್ನು ಹೊಂದಿ, ಆಧಾರ್ ಲಿಂಕ್ ಮಾಡಿಸಿರಬೇಕು. ಅರ್ಜಿಯೊಂದಿಗೆ ಆದಾಯೋತ್ಪನ್ನ ಚಟುವಟಿಕೆಯನ್ನು ಆಯ್ಕೆ ಮಾಡಿಕೊಂಡು ಯೋಜನಾ ವರದಿಯನ್ನು ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳನ್ನು ದೇವಿನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.