ಸಾರ್ವಜನಿಕರೇ ಗಮನಿಸಿ : ನಾಳೆ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

ನಾಳೆ ಗಾಂಧಿ ಜಯಂತಿ ಪ್ರಯುಕ್ತ ಬೆಂಗಳೂರಿನಲ್ಲಿ ಪ್ರಾಣಿ ಹತ್ಯೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಬೆಂಗಳೂರು ನಗರ ಪಾಲಿಕೆ ( ಬಿಬಿಎಂಪಿ) ಶುಕ್ರವಾರ ಆದೇಶ ಹೊರಡಿಸಿದೆ. ಗಾಂಧಿ ಜಯಂತಿ ನಿಮಿತ್ತ ಬೆಂಗಳೂರಿನಲ್ಲಿ ಪ್ರಾಣಿ ಹತ್ಯೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಲಾಗಿದ್ದು, ಈ ಬಗ್ಗೆ ಆದೇಶ ಹೊರಡಿಸಲಾಗಿದೆ.

ಇದೇ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಹಿನ್ನಲೆಯಲ್ಲಿ ರಾಜ್ಯ ಪಶುಸಂಗೋಪನಾ ಇಲಾಖೆ ಈ ಆದೇಶ ಹೊರಡಿಸಿದೆ. ಈ ಸುತ್ತೋಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎಲ್ಲಾ ಕಸಾಯಿಖಾನೆಗಳಲ್ಲಿ ಪ್ರಾಣಿಗಳನ್ನು ಕಡಿಯುವುದನ್ನು ಮತ್ತು ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಹೇಳಿದೆ. ಹಾಗೆಯೇ ಈ ನಿಯಮ ಕೂಡಾ, ಚಿಲ್ಲರೆ ಅಂಗಡಿಗಳಿಗೂ ಅನ್ವಯಿಸುತ್ತದೆ. ನಗರದ ಕಸಾಯಿಖಾನೆಗಳು ಮತ್ತು ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

Leave A Reply

Your email address will not be published.