ಮತ್ತೆ ವರುಣಾರ್ಭಟ : 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – ಹವಾಮಾನ ಇಲಾಖೆ ಸೂಚನೆ
ಅಕ್ಟೋಬರ್ ಆರಂಭದಲ್ಲೇ ರಾಜ್ಯದಲ್ಲಿ ಎಲ್ಲೆಡೆ ಮಳೆ ಆರ್ಭಟ ಜೋರಾಗಿದೆ. ಮಳೆಯ ಅಬ್ಬರ ಜೋರಾಗಿದ್ದು, ಈ 9 ಜೆಲ್ಲೆಗಳಿಗೆ ಹವಾಮಾನ ಇಲಾಖೆ, ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮತ್ತೆ ಆರಂಭವಾಗಿದ್ದು ಮುಂದಿನ ಮೂರು ದಿನ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಂಭವದ ಮುನ್ಸೂಚನೆ ದೊರಕ್ಕಿದ್ದು, ಹವಾಮಾನ ಇಲಾಖೆಯು ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಸೂಚನೆ ನೀಡಿದೆ.
ರಾಜ್ಯಾದ್ಯಂತ ಸಾಧಾರಣ ಮಳೆಯಾಗಿದ್ದು ಬೆಂಗಳೂರಿನಲ್ಲಿ ಶುಕ್ರವಾರ ಸಂಜೆ ತುಂತುರು ಮಳೆ
ಆರಂಭವಾಗಿ ನಂತರ ರಾತ್ರಿ ಪೂರ ಧಾರಾಕಾರವಾಗಿ ಮಳೆ ಸುರಿದಿದೆ. ಆದ್ದರಿಂದ ಬೆಂಗಳೂರು ನಗರದಲ್ಲಿ ಇನ್ನೂ ಎರಡು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ 48 ಗಂಟೆಗಳ ಸಮಯದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಶನಿವಾರ ಬೆಳಗ್ಗೆಯೂ ನಗರದಲ್ಲಿ ಮೋಡ ಕವಿದ ವಾತಾವರಣವಿತ್ತು. ಗರಿಷ್ಠ ಹಾಗೂ ಕನಿಷ್ಠ ತಾಪಮಾನ ಕ್ರಮವಾಗಿ 26 ಡಿಗ್ರಿ ಸೆಲ್ಸಿಯಸ್ ಹಾಗೂ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಆದ್ದರಿಂದ ಬೆಂಗಳೂರಿನ ಜನರಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಿದೆ.
ಇನ್ನುಳಿದ ರಾಜ್ಯಗಳಲ್ಲಿ ಗುರುವಾರ ರಾತ್ರಿಯಿಂದಲೇ ಶುಕ್ರವಾರ ಬೆಳಗ್ಗೆ 8.30 ರವರೆಗೆ ಭಾರೀ ಮಳೆಯಾಗಿದೆ. ಯಾದಗಿರಿ ಜಿಲ್ಲೆಯ ಹುಣಸಗಿ, ಕೊಪ್ಪಳ ಜಿಲ್ಲೆಯ ಮುನಿರಾಬಾದ್, ಬೀದರ್ ಜಿಲ್ಲೆಯ ಹಲಬರ್ಗಾ, ಬಾಗಲಕೋಟೆ ಜಿಲ್ಲೆಯ ಇಳಕಲ್, ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ತಲಾ 5 ಸೆಂ.ಮೀ ಮಳೆಯಾಗಿದ್ದು, ಹಾಗೂ ಬೀದರ್, ಹುಮನಾಬಾದ್, ಕಲಬುರಗಿ ಜಿಲ್ಲೆಯ ಅಫಜಲಪುರ ಮತ್ತು ಬಳ್ಳಾರಿ ಜಿಲ್ಲೆಯ ಕಂಪ್ಲಿಯಲ್ಲಿ ತಲಾ 4 ಸೆಂ.ಮೀ. ಮಳೆ ಸುರಿದಿದೆ