ಯುವಕನೋರ್ವನ ಬರ್ಬರ ಹತ್ಯೆ | ಹಳೆ ವೈಷಮ್ಯವೇ ಕೊಲೆಗೆ ಕಾರಣವೇ?

ಯುವಕನೋರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ ಘಟನೆಯೊಂದು ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ನೀಲನಹಳ್ಳಿ ಗ್ರಾಮದ ಗೇಟ್ ಬಳಿ ತಡರಾತ್ರಿ ಘಟನೆ ನಡೆದಿದೆ. ಲಕ್ಷ್ಮೀ ಸಾಗರ ಗ್ರಾಮದ ಧನಂಜಯ (26) ಕೊಲೆಯಾದ ಯುವಕ.

 

ಹಳೇ ವೈಷಮ್ಯಕ್ಕಾಗಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದುಷ್ಕರ್ಮಿಗಳು ಕತ್ತು ಕುಯ್ದು ಕೊಲೆ ಮಾಡಿದ್ದಾರೆ.

ರೌಡಿಶೀಟರ್ ರೋಹಿತ್ ಮತ್ತು ಆತನ ಸಹಚರರಿಂದ ಈ ಬರ್ಬರ ಕೃತ್ಯ ನಡೆದಿದೆ ಎನ್ನಲಾಗಿದ್ದು, ಕೊಲೆ ಮಾಡಿದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಮೃತ ಧನಂಜಯ ಪಾಂಡವಪುರ ಪಟ್ಟಣದಲ್ಲಿ ಮೊಬೈಲ್ ಅಂಗಡಿ ಇಟ್ಟುಕೊಂಡಿದ್ದ. ಮೇಲುಕೋಟೆ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.