ಆಂಬುಲೆನ್ಸ್‌ನಲ್ಲಿಯೇ ಕರೆತಂದು ಆಸ್ತಿ ನೋಂದಣಿ ; ತಾಯಿ ಜೀವಕೆ ಬೆಲೆ ಕೊಡದ ಕರುಳ ಕುಡಿಗಳು !!
ದುಡ್ಡು ಇದ್ರೆ ದುನಿಯಾ ಅನ್ನೋ ಮಾತಿದೆ. ಹಾಗೆಯೇ ಬೆಳಗಾವಿ ಜಿಲ್ಲೆಯ ಉಪನೋಂದಣಾ ಕಚೇರಿಯಲ್ಲಿ ಒಂದು ಘಟನೆ ಬೆಳಕಿಗೆ ಬಂದಿದೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧೆಯೊಬ್ಬರನ್ನು, ಆಸ್ತಿ ಪತ್ರಗಳ ಮೇಲೆ ಸಹಿ ಮಾಡಿಸಲು ತನ್ನ ಮಕ್ಕಳು ಆಂಬುಲೆನ್ಸ್ ನಲ್ಲಿ ಕರೆತಂದಿದ್ದಾರೆ. ಈ ಘಟನೆ ಶುಕ್ರವಾರ ನಡೆದಿದ್ದು ಈ ಸಂಬಂಧ ದೃಶ್ಯಗಳಿರುವ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಶನಿವಾರ ಎಲ್ಲೆಡೆ ಹರಿದಾಡಿದ್ದು ಜನರು ಹಲವಾರು ಟೀಕೆಗಳನ್ನು ಮಾಡಿದ್ದಾರೆ.
ಹಿರೇಬಾಗೇವಾಡಿ ನಿವಾಸಿ ಮಹಾದೇವಿ ಅಗಸಿಮನಿ (79) ಅವರು ಬಹಳ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ನಗರದಲ್ಲಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕೆತ್ಸೆ ನೀಡಲಾಗುತ್ತಿತ್ತು . ಅಲ್ಲದೆ ದಿನದಿಂದ ದಿನಕ್ಕೆ ಅವರ ಆರೋಗ್ಯ ಕ್ಷೀಣಿಸುತ್ತಿತ್ತು.
ಇಂತಹ ಸಂದರ್ಭದಲ್ಲಿ ತಾಯಿಯ ಅರೋಗ್ಯ ಸ್ಥಿತಿಯನ್ನು ಲೆಕ್ಕಿಸದೆ ಪ್ರಸ್ತುತ ಮಹಾದೇವಿ ಅವರ ಹೆಸರಿನಲ್ಲಿ 2 ಎಕರೆ 35 ಗುಂಟೆ ಜಮೀನನ್ನು ತಮ್ಮ ಹೆಸರಿನಲ್ಲಿ ಬರೆಸಿಕೊಳ್ಳಲು ಅವರ ಪುತ್ರರು, ಪುತ್ರಿ ಸೇರಿಕೊಂಡು ಆಂಬುಲೆನ್ಸ್‌ನಲ್ಲಿ ಉಪ ನೋಂದಣಾಧಿಕಾರಿ ಕಚೇರಿಗೆ ಕರೆತಂದಿದ್ದರು.ವಯೋವೃದ್ಧೆಯನ್ನು ‘ವಿಶೇಷ ಬೆಡ್’ ಮೇಲೆ ಅರೆ ಸ್ಥಿತಿಯಲ್ಲಿದ್ದಾಗೇ ಅಧಿಕಾರಿಗಳು ಹೆಬ್ಬೆರಳು ಗುರುತು ಪಡೆದು ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.
ನಿಯಮಗಳ ಪ್ರಕಾರ ನಮ್ಮ ನೋಂದಣಿ ಪುಸ್ತಕದಲ್ಲಿ ಸಹಿ ಮಾಡಿದ್ದಾರೆ. ಮಾನವೀಯತೆ ದೃಷ್ಟಿಯಿಂದ ನಮ್ಮ ಆಸ್ಪತ್ರೆಯ ಆಂಬುಲೆನ್ಸ್‌ನಲ್ಲೇ ಕಳುಹಿಸಿಕೊಟ್ಟಿದ್ದೇವೆ. ಅನಾರೋಗ್ಯಕ್ಕೆ ಒಳಗಾದವರ ಸಹಿಗಾಗಿ ಸ್ಥಳಕ್ಕೆ ಹೋಗಲು ಅವಕಾಶವಿದೆ. ಕುಟುಂಬದವರು ಇದಕ್ಕೆ1,000 ರೂ ಶುಲ್ಕ ತುಂಬಿ ಅರ್ಜಿ ಸಲ್ಲಿಸಬೇಕು. ಆದರೆ ಇವರು ಅರ್ಜಿ ಸಲ್ಲಿಸಿಲ್ಲ ಎಂದು ಈ ಬಗ್ಗೆ ಉಪ ನೋಂದಣಾಧಿಕಾರಿ ಪದ್ಮನಾಭ ಗುಡಿ, ಅವರು ಪ್ರತಿಕ್ರಿಯೆ ನೀಡಿದ್ದಾರೆ.