ಅಡಕೆಗೆ ಎಲೆಚುಕ್ಕಿ ರೋಗ; ಬೆಳೆಗಾರರಿಗೆ ಸರ್ಕಾರದಿಂದ ಸಿಹಿ ಸುದ್ದಿ

ಅಡಕೆಗೆ ಹಳದಿ ರೋಗ ಹಾಗೂ ಎಲೆ ಚುಕ್ಕಿ ರೋಗ ಕಾಣಿಸಿಕೊಂಡಿದ್ದು, ಇದರಿಂದ ಇಳುವರಿ ಕಡಿಮೆಯಾಗುವ ಆತಂಕವನ್ನು ಬೆಳೆಗಾರರು ಹೊಂದಿದ್ದರು. ಇದೀಗ ರಾಜ್ಯ ಸರ್ಕಾರ ಅವರಿಗೆ ಬಂಪರ್ ನ್ಯೂಸ್ ನೀಡಿದೆ.

ಹಳದಿ ರೋಗ ಹಾಗೂ ಎಲೆ ಚುಕ್ಕಿ ರೋಗಕ್ಕೆ ಸಿಂಪಡಿಸುವ ಔಷಧವನ್ನು ಅಡಕೆ ಬೆಳೆಗಾರರಿಗೆ ಉಚಿತವಾಗಿ ನೀಡುವ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ತೀರ್ಮಾನವನ್ನು ಕೈಗೊಂಡಿದೆ.

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ ಈ ವಿಷಯ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ತೋಟಗಾರಿಕಾ ಸಚಿವ ಮುನಿರತ್ನ, ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ ಹಾಗೂ ಗೃಹ ಸಚಿವ ಅರಗ ಜ್ಞಾನೇಂದ್ರ ಅವರೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಿದ್ದು, ಈ ಸಂದರ್ಭದಲ್ಲಿ ಉಚಿತವಾಗಿ ಔಷಧಿ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. ಅಲ್ಲದೆ ಇದಕ್ಕೆ ಬೇಕಾಗುವ ದೋಟಿಯನ್ನು ಸಬ್ಸಿಡಿ ದರದಲ್ಲಿ ನೀಡುವ ಕುರಿತು ತೀರ್ಮಾನಿಸಲಾಗಿದೆ ಎಂದಿದ್ದಾರೆ.

Leave A Reply

Your email address will not be published.