ಅಡಕೆಗೆ ಎಲೆಚುಕ್ಕಿ ರೋಗ : ರಾಜ್ಯ ಸರಕಾರದಿಂದ ಆರ್ಥಿಕ ನೆರವು

ರಾಜ್ಯ ಸರ್ಕಾರವು ಅಡಿಕೆ ಬೆಳಗಾರರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಅಡಿಕೆಗೆ ಎಲೆಚುಕ್ಕೆ ರೋಗ ಹಿನ್ನೆಲೆಯಲ್ಲಿ ಅಡಿಕೆ ಬೆಳೆಗಾರರಿಗೆ ತಲಾ 1 ಹೆಕ್ಟೇರ್ ಗೆ ಔಷಧ ಸಿಂಪಡಣೆಗೆ ರಾಜ್ಯ ಸರ್ಕಾರ 4 ಸಾವಿರ ರೂ. ಆರ್ಥಿಕ ನೆರವು ನೀಡಲಿದೆ.

ಅಡಿಕೆಗೆ ಎಲೆಚುಕ್ಕೆ ರೋಗಕ್ಕೆ ಔಷಧಿ ಸಿಂಪಡಣೆಗೆ ಪ್ರತಿ ಹೆಕ್ಟೇರ್ ಗೆ 4 ಸಾವಿರ ರೂ. ಹಾಗೂ ಮೊದಲ ಸಿಂಪಡಣೆಗೆ 1.5 ಹೆಕ್ಟೇರ್ ಅಡಿಕೆ ತೋಟ ಹೊಂದಿರುವ ರೈತರಿಗೆ ಆರ್ಥಿಕ ನೆರವು ಸಿಗಲಿದೆ.

ಈ ಕುರಿತು ಮಾಹಿತಿ ನೀಡಿರುವ ಗೃಹ ಸಚಿವ ಅರಗಜ್ಞಾನೇಂದ್ರ, ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸರ್ಕಾರ 8 ಕೋಟಿ ರೂ. ಅನುದಾನ ನೀಡಿದೆ. ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಉತ್ತರಕನ್ನಡ, ದಕ್ಷಿಣ ಕನ್ನಡ, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸುಮಾರು 20 ಸಾವಿರ ಹೆಕ್ಟೇರ್ ಅಡಿಕೆ ಬೆಳೆ ಪ್ರದೇಶದಲ್ಲಿ ಎಲೆ ಚುಕ್ಕಿ ರೋಗ ಹಬ್ಬಿದ್ದು, ಸರ್ಕಾರ ನಿಯಂತ್ರಣಕ್ಕೆ ಮೊದಲ ಹಂತದಲ್ಲಿ 8 ಕೋಟಿ ರೂ. ಅನುದಾನ ನೀಡಿದೆ. ಈ ಪೈಕಿ 4 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ತಿಳಿಸಿದ್ದಾರೆ.

Leave A Reply

Your email address will not be published.