Good News : ಮಹಿಳೆಯರೇ ನಿಮಗೊಂದು ಗುಡ್ ನ್ಯೂಸ್ | ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ
ಸರ್ಕಾರ ಮಹಿಳೆಯ ಮತ್ತು ಮಕ್ಕಳ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದು, ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ವಿಶೇಷ ಗಮನ ಹರಿಸುತ್ತಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ತೊಡಕಾಗದಂತೆ ಉಚಿತ ಶಿಕ್ಷಣ, ಹಾಸ್ಟೆಲ್ ವ್ಯವಸ್ಥೆ, ವ್ಯಾಸಂಗಕ್ಕೆ ಹೆಚ್ಚಿನ ಆರ್ಥಿಕ ಪ್ರಾಶಸ್ತ್ಯ ನೀಡುತ್ತಾ ಬಂದಿದೆ. ಇದರ ಜೊತೆಗೆ ಮಹಿಳೆಯರು ಸ್ವಾವಲಂಬಿಗಳಾಗಿ , ಸ್ವಯಂ ಉದ್ಯೋಗ ಅರಸುವ ಮಹಿಳೆಯರಿಗಾಗಿಯೇ ಆರ್ಥಿಕ ನೆರವು ನೀಡುವ ಜೊತೆಗೆ ಉಚಿತ ಶಿಕ್ಷಣ , ಟ್ರೈನಿಂಗ್ ಕೂಡ ನೀಡಿ ಬೆಂಬಲಿಸುತ್ತಿದೆ.
ನಿರುದ್ಯೋಗಿ ಮಹಿಳೆಯರಿಗಾಗಿ ಸ್ವಯಂ ಉದ್ಯೋಗ ಹೊಂದಲು ನೆರವಾಗಲು ರಾಜ್ಯ ಸರ್ಕಾರ ಉದ್ಯೋಗಿನಿ ಯೋಜನೆ ಜಾರಿ ಮಾಡಿದ್ದು,ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಈ ಯೋಜನೆಯನ್ನು ಅನುಷ್ಠಾನಗೊಳಿಸಿ ಸಾಲ ಸೌಲಭ್ಯ ಒದಗಿಸುತ್ತಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ವತಿಯಿಂದ 2021-22ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಯೋಜನೆಯಡಿ ಅನುದಾನವನ್ನು ಪಡೆಯಲು, ಉದ್ಯೋಗಿನಿ ಯೋಜನೆಯಡಿ ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಹಾಗೂ ಸಂಕಷ್ಟಕ್ಕೊಳಾಗದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ .
ಉದ್ಯೋಗಿನಿ ಯೋಜನೆಗೆ ಅರ್ಜಿ ಸಲ್ಲಿಸಲು, 18 ವರ್ಷದಿಂದ 50 ವರ್ಷದ ಮಹಿಳೆಯರು ಅರ್ಹರಾಗಿದ್ದು, ಜೊತೆಗೆ ಕರ್ನಾಟಕ ರಾಜ್ಯದಲ್ಲಿ ನೆಲೆಸಿರುವ ಖಾಯಂ ನಿವಾಸಿಯಾಗಿರಬೇಕು.ಅರ್ಜಿ ಸಲ್ಲಿಸುವ ವ್ಯಕ್ತಿಯ ಕುಟುಂಬದ ವಾರ್ಷಿಕ ಆದಾಯ ರೂ. 40 ಸಾವಿರಕ್ಕೆ ಮೀರಿರಬಾರದು.
ಈ ಯೋಜನೆಗೆ ವಿಧವೆಯರು, ಸಂಕಷ್ಟಕ್ಕೊಳಗಾದ ಮಹಿಳೆಯರು, ಅಂಗವಿಕಲ ಮಹಿಳೆಯರು, ದೇವದಾಸಿ ಮಹಿಳೆಯರಿಗು ಕೂಡ ಆದ್ಯತೆ ನೀಡಲಾಗಿದ್ದು, ಈ ಯೋಜನೆ ಪಡೆಯಲು ಸ್ವಯಂ ಉದ್ಯೋಗದಲ್ಲಿ ಸಾಕಷ್ಟು ಜ್ಞಾನ ಮತ್ತು ಅನುಭವ ಹೊಂದಿರಬೇಕಾಗಿದೆ. ಇದರ ಜೊತೆಗೆ ಯೋಜನಾ ವರದಿ ಕಡ್ಡಾಯವಾಗಿ ಲಗತ್ತಿಸಬೇಕಾಗಿದೆ.
ಬ್ಯಾಂಕ್ ಸಾಲ ನೀಡಲು ಒಪ್ಪಿದರೆ ಸಹಾಯಧನ ಬಿಡುಗಡೆ ಮಾಡಲಾಗುತ್ತದೆ.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಶೇ.50ರಷ್ಟು ಹಾಗೂ ಘಟಕ ವೆಚ್ಚ ಒಂದು ಲಕ್ಷದಿಂದ ಐದು ಲಕ್ಷಗಳವರೆಗೆ ವಿಶೇಷ ವರ್ಗದ ಮಹಿಳೆಯರಿಗೆ ಸಹಾಯಧನವನ್ನು ಬ್ಯಾಂಕ್ ಮಂಜೂರು ಮಾಡಿದ ಸಾಲದ ಮೊತ್ತಕ್ಕೆ ಅನುಗುಣವಾಗಿ ಸಹಾಯಧನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಬೇಕಾದ ವಿವರಗಳು:
ಆಸಕ್ತರು ಜಾತಿ/ಆದಾಯ ಪ್ರಮಾಣ ಪತ್ರ, ಬಿಪಿಎಲ್ ಕಾರ್ಡ್, ಆಧಾರ್ ಕಾರ್ಡ್, ಶಾಲಾ ವರ್ಗಾವಣೆ ಪತ್ರ, ಎಸ್ಎಸ್ಎಲ್ಸಿ ಅಂಕ ಪಟ್ಟಿ, ಯೋಜನಾ ವರದಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ವಾಸಸ್ಥಳ ಪ್ರಮಾಣ ಪತ್ರ, ವೋಟರ್ ಐಡಿ, ಆಧಾರ ಕಾರ್ಡ್, ಬ್ಯಾಂಕ್ ಖಾತೆಯ ಚಟುವಟಿಕೆಗೆ ಅನುಗುಣವಾಗಿ ಗ್ರಾಮಾ ಪಂಚಾಯಿತಿ, ಪಟ್ಟಣ ಪಂಚಾಯಿತಿ, ನಗರಪಾಲಿಕೆ, ಮಹಾನಗರ ಪಾಲಿಕೆಗಳಲ್ಲಿ ಪರವಾನಿಗೆಯ ಪ್ರತಿಯನ್ನು ಹೊಂದಿರಬೇಕು.
ಈ ಯೋಜನೆಯ ಲಾಭ ಪಡೆಯಲು ಬಯಸುವ ಆಸಕ್ತರು ಅರ್ಜಿಯನ್ನು ವಿಜಯನಗರ ಜಿಲ್ಲೆಯ ಆಯಾ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಪಡೆದು ಭರ್ತಿಮಾಡಿ ಅದೇ ಕಚೇರಿಯಲ್ಲಿ ಅ.18ರೊಳಗಾಗಿ ಸಲ್ಲಿಸಬೇಕಾಗಿದೆ.
ಉದ್ಯೋಗಿನಿ ಯೋಜನೆಯಡಿಯಲ್ಲಿ ಹೊಸಪೇಟೆ 3, ಕೂಡ್ಲಿಗಿ 2, ಕೊಟ್ಟೂರು 2, ಹರಪನಹಳ್ಳಿ 2, ಹಡಗಲಿ 2 ಹಾಗೂ ಹಗರಿಬೊಮ್ಮನಹಳ್ಳಿ 2 ಸೇರಿದಂತೆ ಒಟ್ಟು 13 ಭೌತಿಕ ಗುರಿಗಳನ್ನು ಅಂದಾಜಿಸಲಾಗಿದ್ದು, ಒಂದು ಗುರಿಗೆ 1.5ಲಕ್ಷದಂತೆ ಒಟ್ಟು19.5ಲಕ್ಷಗಳ ಸಾಲ ಮತ್ತು ಸಹಾಯಧನದ ಸೌಲಭ್ಯವನ್ನು ಫಲಾನುಭವಿಗಳಿಗೆ ಒದಗಿಸಿಕೊಡಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯಲ್ಲಿ ಆಯ್ಕೆ ಮಾಡಲಾಗುತ್ತದೆ.
ಆಸಕ್ತಿ ಉಳ್ಳ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆಯಬಹುದಾಗಿದೆ.