ಜಿಲ್ಲಾ ಗ್ರಾಮ ಪಂಚಾಯ್ತಿಗಳಲ್ಲಿ ಖಾಲಿ ಇರುವ ಉದ್ಯೋಗಕ್ಕೆ ಅರ್ಜಿ ಆಹ್ವಾನ : 10th, 12th ಪಾಸಾದವರಿಗೆ ಸರ್ಕಾರಿ ಉದ್ಯೋಗ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ 04 ತಾಲ್ಲೂಕುಗಳ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳನ್ನು ನಿಗದಿತ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇರೆಗೆ ಹಾಗೂ ಮೀಸಲಾತಿ ಅನ್ವಯ ನೇಮಕಾತಿ ಪ್ರಕ್ರಿಯೆ ಜರುಗಿಸಲಾಗಿದೆ.

ಹುದ್ದೆಗಳ ವಿವರ :
ಕರವಸೂಲಿಗಾರರು : 04
ಡಾಟಾ ಎಂಟ್ರಿ ಆಪರೇಟರ್ : 04
ಅಟೆಂಡಂಟ್ : 08
ಕ್ಲೀನರ್ : 34

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-10-2022

ವಿದ್ಯಾರ್ಹತೆ : ಕರವಸೂಲಿಗಾರರು : ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಪಾಸ್.
ಡಾಟಾ ಎಂಟ್ರಿ ಆಪರೇಟರ್ : ಪಿಯುಸಿ ಅಥವಾ
ತತ್ಸಮಾನ ವಿದ್ಯಾರ್ಹತೆ ಪಾಸ್
ಅಟೆಂಡಂಟ್ : ಎಸ್‌ಎಸ್‌ಎಲ್‌ಸಿ ಪಾಸ್.
ಕ್ಲೀನರ್ : ಎಸ್ಎಸ್ಎಲ್‌ಸಿ ಪಾಸ್‌,

ಕರವಸೂಲಿಗಾರರು ಮತ್ತು ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಕಂಪ್ಯೂಟರ್ ತರಬೇತಿ ಕೋರ್ಸ್‌ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ 6 ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು.

ಈ ಹುದ್ದೆಗಳಿಗೆ ಕಾರ್ಮಿಕ ಇಲಾಖೆಯಿಂದ ನಿಗಧಿಪಡಿಸಿದ ಕನಿಷ್ಠ ವೇತನ ನೀಡಲಾಗುತ್ತದೆ.

ವಯೋಮಿತಿ : ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ ಗರಿಷ್ಠ.
ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ.

ಅರ್ಜಿ ಶುಲ್ಕ : ಸಾಮಾನ್ಯ ಅಭ್ಯರ್ಥಿಗಳಿಗೆ Rs.300.
ಎಸ್‌ಸಿ / ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.100
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.200

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave A Reply

Your email address will not be published.