ಬಿಜೆಪಿ ಮತ್ತು ಕಾಂಗ್ರೆಸ್ ಮುಕ್ತ ದೇಶಕ್ಕಾಗಿ ಜೆಡಿಎಸ್ ಹೊಸ ಪಕ್ಷದೊಂದಿಗೆ ಮೈತ್ರಿ : ಯಾವುದು ಆ ಹೊಸ ಪಕ್ಷ ?
ಪ್ರಬಲ ರಾಜಕೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಮುಕ್ತ ರಾಜಕೀಯಕ್ಕಾಗಿ ಇನ್ನೊಂದು ಪ್ರಬಲ ರಾಜಕೀಯ ಶಕ್ತಿ ಜೆಡಿಎಸ್ ಪಕ್ಷವು ಹೊಸ ರಾಷ್ಟ್ರೀಯ ಪಕ್ಷದೊಂದಿಗೆ ಮಿಲನಗೊಳ್ಳಲು ತೀರ್ಮಾನಿಸಿದೆ.
ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ನೇತೃತ್ವದ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಪಕ್ಷವನ್ನು ‘ಭಾರತ್ ರಾಷ್ಟ್ರ ಸಮಿತಿ’ ಎಂಬ ಶೀರ್ಷಿಕೆಯಲ್ಲಿ ರಾಷ್ಟ್ರೀಯ ಪಕ್ಷವನ್ನಾಗಿ ಘೋಷಿಸಿ , ಅವರೊಂದಿಗೆ ಜೆಡಿಎಸ್ ಪಕ್ಷ ಕೈ ಜೋಡಿಸಲಾಗುವುದು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಜೆಡಿಎಸ್ ಶಾಸಕರೊಂದಿಗೆ ಇಂದು ಹೈದರಾಬಾದ್ಗೆ ತೆರಳಿದ್ದ ಅವರು, ಬಿಆರ್ಎಸ್ ಜತೆ ಕೈಜೋಡಿಸಿ ಮುಂಬರುವ ಎಲ್ಲಾ ಚುನಾವಣೆಯನ್ನು ಎದುರಿಸಲಿದ್ದೇವೆ ಎಂದು ತಿಳಿಸಿದ್ದಾರೆ.
‘ಜೆಡಿಎಸ್ ಮತ್ತು ಬಿಆರ್ಎಸ್ ಮಿತ್ರಪಕ್ಷಗಳಾಗಿ ಕೆಲಸ ಮಾಡಲಿವೆ. ಬಿಆರ್ಎಸ್ ರಾಷ್ಟ್ರೀಯ ಪಕ್ಷವಾಗಿ ಹೊರ ಹೊಮ್ಮಿರುವುದನ್ನು ಸ್ವಾಗತಿಸುತ್ತೇವೆ ಎಂದಿದ್ದಾರೆ.