KPSC : ಗ್ರೂಪ್ ಸಿ ಹುದ್ದೆಗೆ ಅರ್ಜಿ ಆಹ್ವಾನ | ಗಣತಿದಾರರು ಕಂ ಡಾಟಾ ಎಂಟ್ರಿ ಅಪರೇಟರ್ ಹುದ್ದೆ | ಹೆಚ್ಚಿನ ವಿವರ ಇಲ್ಲಿದೆ

ಕರ್ನಾಟಕ ಲೋಕಸೇವಾ ಆಯೋಗವು ಕರ್ನಾಟಕ ನಾಗರಿಕ ಸೇವೆಗಳ ( ನೇರ ನೇಮಕಾತಿ) ( ಸಾಮಾನ್ಯ) ನಿಯಮಗಳು 2021 ಹಾಗೂ ತಿದ್ದುಪಡಿ ನಿಯಮ 2022 ನಿಯಮಗಳನ್ವಯ ಈ ಕೆಳಕಂಡ ಹೈದರಾಬಾದ್ ಕರ್ನಾಟಕ ವೃಂದದ ಗ್ರೂಪ್ ಸಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಕಂಡ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು.

 

ಇಲಾಖೆಯ ಹೆಸರು / ಹುದ್ದೆಯ ಹೆಸರು : ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಗಣತಿದಾರರು ಕಂ ಡಾಟಾ ಎಂಟ್ರಿ ಅಪರೇಟರ್

ಹುದ್ದೆ ಸಂಖ್ಯೆ – 13

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 07-10-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05-11-2022
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 07-11-2022

ಶೈಕ್ಷಣಿಕ ವಿದ್ಯಾರ್ಹತೆ : ಅಭ್ಯರ್ಥಿಗಳು ಪಿಯುಸಿ ( 10+2) ತೇರ್ಗಡೆಹೊಂದಿರಬೇಕು.

ವಯೋಮಿತಿ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅನುಭೂತಿಯಲ್ಲಿ, ಆಯಾ ಹುದ್ದೆಗಳ ಮುಂದೆ ನಮೂದಿಸಿರುವ ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.

ವಯೋಮಿತಿ : ಕನಿಷ್ಟ 18 ವರ್ಷ, ಗರಿಷ್ಠ ಸಾಮಾನ್ಯ ಅರ್ಹತೆ : 35 ವರ್ಷಗಳು
ಪ್ರವರ್ಗ 2 ( ಎ) ,2(ಬಿ), 3 ( ಎ) 3 ( ಬಿ) – 38 ವರ್ಷಗಳು, ಪ.ಜಾತಿ/ಪ.ಪಂಗಡ/ಪ್ರವರ್ಗ – 40 ವರ್ಷಗಳು

ಅರ್ಜಿ ಶುಲ್ಕ : ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ರೂ.600/-
ಪ್ರವರ್ಗ2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ರೂ.300/-
ಮಾಜಿ ಸೈನಿಕರಿಗೆ ರೂ.50/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ -1, ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನೋಟಿಫಿಕೇಶನ್ ಲಿಂಕ್ ಕ್ಲಿಕ್ ಮಾಡಿ

Leave A Reply

Your email address will not be published.