Big News | ‘ಕಾಂತಾರ’ ಸಿನಿಮಾದ ಪೋಸ್ಟರ್ ನಲ್ಲಿ ದೇವರಿಗೆ ವಿಕೃತವಾಗಿ ಅವಮಾನ !

ರಿಷಬ್ ಶೆಟ್ಟಿ (Rishabh Shetty) ನಟಿಸಿ ನಿರ್ದೇಶಿಸಿರುವ ಕಾಂತಾರ (Kantara) ಸಿನಿಮಾ ಬಿಡುಗಡೆ ಆದ ದಿನದಿಂದ, ಈಗ ಏಳು ದಿನಗಳು ಕೂಡಾ ಸಿನಿಮಾ ಕಂಬಳದ ಕೋಣದ ಥರ ಓಡುತ್ತಿದೆ. ಈವರೆಗೂ ಎಲ್ಲೆಡೆ ಹೌಸ್ ಫುಲ್ ಪ್ರದರ್ಶನದ ಕಾಣುತ್ತಿದೆ. ಪ್ರೇಕ್ಷಕ ವರ್ಗ ಸಿನಿಮಾವನ್ನು ಎಂಜಾಯ್ ಮಾಡುತ್ತಿದ್ದರೆ,ಅತ್ತ ಚಿತ್ರ ತಂಡ ದುಡ್ಡು ಬಾಚಿಕೊಳುತ್ತಿದೆ. ಆದರ ಅಲ್ಲೊಂದು ಕಡೆ ಕಾಂತಾರ ಚಿತ್ರದ ಪೋಸ್ಟರ್ ನ ಮೇಲೆ ದೇವರಿಗೆ ಅವಹೇಳನ ಮಾಡಿದ ಸುದ್ದಿ ಬಂದಿದೆ.

ಶಿವಮೊಗ್ಗದಲ್ಲಿ ಕೂಡ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿದೆ ಇದರ ಮಧ್ಯೆ ಶಿವಮೊಗ್ಗದ ಗೋಡೆ ಗೋಡೆಗಳ ಮೇಲೆ ಕಾಂತಾರ ಸಿನಿಮಾದ ಪೋಸ್ಟರ್ ಮೇಲೆ ವಿಕೃತ ಬರಹ ಬರೆದಿದ್ದಾರೆ. ದೇವರಿಗೆ ಅವಹೇಳನ ಮಾಡುವಂತಹ ಪದ ಬಳಕೆ ಮಾಡಿದ್ದಾರೆ. ಈ ಬರಹವುಳ್ಳ ಪೋಸ್ಟರ್ ನೋಡಿದ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಈ ಘಟನೆ ನಡೆದಿದ್ದು, ಕಾಂತಾರ ಸಿನಿಮಾ ಪೋಸ್ಟರ್ ಮೇಲೆ ‘F * * K YOU G * D’ ಅಂತಾ ಕಿಡಿಗೇಡಿಗಳು ಬರೆದಿದ್ದು, ಪೋಸ್ಟರ್ ಮೇಲೆ ಪೆನ್ನಿನಿಂದ ಈ ಬರಹವನ್ನು ಬರೆಯಲಾಗಿದೆ. ಸ್ಥಳಕ್ಕೆ ಜಯನಗರ ಠಾಣೆ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದು, ತಕ್ಷಣವೇ ಅವಹೇಳನಕಾರಿ ಬರಹ ತೆಗೆಸಿದ್ದಾರೆ ಪೊಲೀಸರು.

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಭೇಟಿ ಮಾಡಿ, ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಈ ರೀತಿಯಲ್ಲಿ ದೇವರಿಗೆ ಅಪಮಾನ ಮಾಡಿದ ಕಿಡಿಗೇಡಿಗಳ ವಿರುದ್ಧ ಕ್ರಮಕ್ಕಾಗಿ ಒತ್ತಾಯಿಸಿದ್ದಾರೆ.

Leave A Reply

Your email address will not be published.