ಸಿಎಂ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ ದಿ.ಪ್ರವೀಣ್ ನೆಟ್ಟಾರು ಪತ್ನಿ ನೂತನ

ಬೆಂಗಳೂರು : ಬಿಜೆಪಿ ಕಾರ್ಯಕರ್ತ ದಿವಂಗತ ಪ್ರವೀಣ್ ನೆಟ್ಟಾರು ಅವರ‌ ಪತ್ನಿ ಶ್ರೀಮತಿ ನೂತನ ಅವರು ಶುಕ್ರವಾರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಎಸ್.‌ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು.

ಪ್ರವೀಣ್ ಮನೆಗೆ ಭೇಟಿ ನೀಡಿ ಉದ್ಯೋಗ ಭರವಸೆ ನೀಡಿ,ಇದೀಗ ಪತ್ನಿ ನೂತನ ಅವರಿಗೆ ಗ್ರೂಪ್ ಸಿ ಹುದ್ದೆಗೆ ನೇಮಕಾತಿ ಮಾಡಿದ್ದಕ್ಕಾಗಿ ಹಾಗೂ ಮಂಗಳೂರಿನಲ್ಲೇ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ನೂತನಾ ಅವರು ಕೃತಜ್ಞತೆ ಸಲ್ಲಿಸಿದರು.

Leave A Reply