SBI Bank : ಎಸ್ ಬಿಐ ಬ್ಯಾಂಕಿನಿಂದ ಸ್ಕಾಲರ್ ಶಿಪ್ | ಈ ರೀತಿ ಅಪ್ಲೈ ಮಾಡಿ
ಎಸ್‌ಬಿಐ ದೇಶದ ಬಹುದೊಡ್ಡ ಸಾರ್ವಜನಿಕ ಬ್ಯಾಂಕ್ ಎನಿಸಿಕೊಂಡಿದೆ. ದೇಶದ ಆರ್ಥಿಕ ಪ್ರಗತಿಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಾ ಬಂದಿದೆ.
ಸರ್ಕಾರಿ ಸ್ವಾಮ್ಯದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಣಕಾಸು ವ್ಯವಹಾರದ ಜೊತೆಗೆ ಸಾಮಾಜಿಕ ಕಳಕಳಿಯನ್ನು ಹೊಂದಿದ್ದು, ಶೈಕ್ಷಣಿಕ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡುವ ಎಸ್ಬಿಐ ಬ್ಯಾಂಕ್, ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ಒದಗಿಸುತ್ತದೆ.
ಎಸ್‌ಬಿಐ ಆಶಾ ಸ್ಕಾಲರ್‌ಶಿಪ್ ಕಾರ್ಯಕ್ರಮ 2022(SBI Asha Scholarship Program 2022): ಎಸ್‌ಬಿಐ ಫೌಂಡೇಶನ್‌ನ Integrated Learning Mission ಅಡಿಯಲ್ಲಿ ಭಾರತದಾದ್ಯಂತ ಕಡಿಮೆ ಆದಾಯ ಹೊಂದಿರುವ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಮುಂದುವರೆಸಲು ಹಣಕಾಸಿನ ನೆರವು ನೀಡಲು ಎಸ್ಬಿಐ ಮುಂದಾಗಿದೆ.
ಈ ವಿದ್ಯಾರ್ಥಿ ವೇತನ ಕಾರ್ಯಕ್ರಮದ ಮೂಲಕ 6 ರಿಂದ 12ನೇ ತರಗತಿಯ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರಿಸಲು ಆರ್ಥಿಕ ನೆರವು ನೀಡುವುದಕ್ಕಾಗಿ ಎಸ್‌ಬಿಐ ಫೌಂಡೇಶನ್ ಆಶಾ ಸ್ಕಾಲರ್‌ಶಿಪ್ ಪ್ರೋಗ್ರಾಂ ಆರಂಭಿಸಿದೆ.
ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಲವು ವರ್ಷಗಳಿಂದ ವಿದ್ಯಾರ್ಥಿವೇತನವನ್ನು ನೀಡುತ್ತಿದೆ. ಸದ್ಯ ಎಸ್‌ಬಿಐ ಫೌಂಡೇಶನ್(SBI Foundation)ನ ಆಶ್ರಯದಲ್ಲಿ ಆಶಾ ವಿದ್ಯಾರ್ಥಿವೇತನಕ್ಕೆ ಅರ್ಜಿಗಳನ್ನ ಆಹ್ವಾನಿಸಿದೆ. ಈ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, 6 ರಿಂದ 12 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಈ ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಾರ್ಷಿಕ 15,000 ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತದೆ.
ಈ ವಿದ್ಯಾರ್ಥಿ ವೇತನ ಪಡೆಯಲು 6 ರಿಂದ 12 ನೇ ತರಗತಿಯಲ್ಲಿ ಓದುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಲದೇ, ವಿದ್ಯಾರ್ಥಿಯು ಭಾರತದ ಪ್ರಜೆಯಾಗಿದ್ದು ಕಳೆದ ಶೈಕ್ಷಣಿಕ ಪರೀಕ್ಷೆಗಳಲ್ಲಿ ಕನಿಷ್ಠ 75% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ರೂ. 3 ಲಕ್ಷಕ್ಕಿಂತ ಕಡಿಮೆ ಇರಬೇಕು.
ಮೇಲೆ ಸೂಚಿಸಿದ ಮಾನದಂಡಗಳಿದ್ದರೆ ಅಭ್ಯರ್ಥಿ/ ಅರ್ಹ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ www.buddy4study.com ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸಲು ಮೂಲ ದಾಖಲೆಗಳು ಅವಶ್ಯಕವಾಗಿದ್ದು, ವಿದ್ಯಾರ್ಥಿಗಳು ಕಳೆದ ವರ್ಷದ ಶೈಕ್ಷಣಿಕ ಪರೀಕ್ಷೆಯ ಅಂಕಪಟ್ಟಿ, ಸರ್ಕಾರದಿಂದ ನೀಡಿದ ಯಾವುದಾದರು ಒಂದು ಗುರುತಿನ ಚೀಟಿ. ( ಆಧಾರ್, ವೋಟರ್ ಐಡಿ, ಡ್ರೈವಿಂಗ್ ಲೈಸನ್ಸ್, ಪಾನ್ ಕಾರ್ಡ್), ಪ್ರಸಕ್ತ ವರ್ಷದ ಪ್ರವೇಶ ಪ್ರಮಾಣಪತ್ರ, ವಿದ್ಯಾರ್ಥಿ ಅಥವಾ ಪೋಷಕರ ಬ್ಯಾಂಕ್ ಖಾತೆಯ ವಿವರಗಳು, ಆದಾಯ ಪ್ರಮಾಣ ಪತ್ರ (ಫಾರ್ಮ್ 16A/ಆದಾಯ ಪ್ರಮಾಣಪತ್ರ/ ಪೇಸ್ಲಿಪ್), ಇವುಗಳ ಜೊತೆಗೆ ವಿದ್ಯಾರ್ಥಿಗಳ ಇತ್ತೀಚಿನ ಫೋಟೋವನ್ನು ಸಲ್ಲಿಸಬೇಕು.
ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ www.buddy4study.com ಗೆ ಭೇಟಿ ನೀಡಿ, ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ. ವೆಬ್ ಸೈಟಿನ ಮುಖಪುಟದಲ್ಲಿ ಎಸ್‌ಬಿಐ ಆಶಾ ವಿದ್ಯಾರ್ಥಿವೇತನ ಲಿಂಕ್ ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಿದಾಗ ಮತ್ತೊಂದು ಪುಟ ತೆರೆದುಕೊಳ್ಳುತ್ತದೆ. ಆ ಪುಟದಲ್ಲಿ ಅರ್ಜಿದಾರರ ಹೆಸರು, ಮೊಬೈಲ್ ನಂಬರ್, ಇ-ಮೇಲ್ ಐಡಿ ಇತ್ಯಾದಿ ವಿವರಗಳನ್ನು ಸಲ್ಲಿಸಿ ರಿಜಿಸ್ಟರ್ ಮಾಡಿಕೊಳ್ಳಬೇಕು. ಬಳಿಕ ನಂತರ ಆಶಾ ವಿದ್ಯಾರ್ಥಿವೇತನ 2022 ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ.
ಅಲ್ಲಿರುವ ಆನ್‌ಲೈನ್ ನಮೂನೆಯಲ್ಲಿ ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡಬೇಕು. ಬಳಿಕ ಸಂಬಂಧಿಸಿದ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು. ಕೊನೆಯಲ್ಲಿ ಅರ್ಜಿದಾರರು ಸಲ್ಲಿಸಿರುವ ಎಲ್ಲಾ ವಿವರಗಳು ಸರಿಯಾಗಿವೆಯೇ ಎಂದು ಖಾತರಿ ಪಡಿಸಿಕೊಂಡು ಪರಿಶೀಲನೆ ನಡೆಸಿ ಸಬ್ಮಿಟ್ ಬಟನ್ ಕ್ಲಿಕ್ ಮಾಡಿದರೆ, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯ ಗೊಳ್ಳುತ್ತದೆ.
ಬ್ಯಾಂಕ್ ವಹಿವಾಟು ಕಾರ್ಯದ ಜೊತೆಗೆ
SBI ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ವಿಶೇಷ ಶೈಕ್ಷಣಿಕ ಕ್ಷೇತ್ರವನ್ನು ಆದ್ಯತೆಯಾಗಿಸಿ ಈ ಮೂಲಕ ಸ್ಟೇಟ್ ಬ್ಯಾಂಕ್ ಇಂಡಿಯಾ ಬ್ಯಾಂಕ್ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುತ್ತಿದೆ.