ವಿದ್ಯಾರ್ಥಿಗಳೇ ಗಮನಿಸಿ : ರಾಜ್ಯದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮತ್ತೆ `ಪಬ್ಲಿಕ್ ಪರೀಕ್ಷೆ’
ರಾಜ್ಯದ ಶಾಲಾ ಮಕ್ಕಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಈ ಬಗ್ಗೆ ಉನ್ನತ ಮಟ್ಟದ ಸಭೆ ನಡೆಯಲಿದ್ದು ಇಲಾಖೆಯು ರೂಪುರೇಷೆ ನಡೆಸಲು ಎಲ್ಲಾ ಸಿದ್ಧತೆ ನಡೆಸಲು ತಯಾರಿ ನಡೆಸಿದೆ ಎನ್ನಲಾಗಿದೆ.
ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕೆ ಗುಣಮಟ್ಟ ಪರಿಶೀಲನೆಗೆ ಪಬ್ಲಿಕ್ ಪರೀಕ್ಷೆ ನಡೆಸಲು ತೀರ್ಮಾನಿಸಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆಯ ಮಾದರಿಯಲ್ಲೇ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ಈ ಪರೀಕ್ಷೆಯನ್ನು ಯಾವ ವರ್ಷದಿಂದ ನಡೆಸಬೇಕು ಎಂಬುದು ಅಕ್ಟೋಬರ್ 12 ರಂದು ನಡೆಯಲಿರುವ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧರವಾಗಲಿದೆ.
ಅ.12ರಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಉನ್ನತ ಮಟ್ಟದ ಸಭೆ ಕರೆದಿದ್ದು, ಸಭೆಯಲ್ಲಿ ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ಕುರಿತಂತೆ ರೂಪುರೇಷೆ ಎಲ್ಲವೂ ಸಿದ್ಧವಾಗಲಿದೆ ಎನ್ನಲಾಗಿದೆ.