Asaduddin Owaisi: ಅತಿ ಹೆಚ್ಚು ಕಾಂಡೋಮ್ ಬಳಸುತ್ತಿರುವವರು ಮುಸ್ಲಿಮರು | ಆ‌ರ್ ಎಸ್‌ಎಸ್ ಮುಖ್ಯಸ್ಥರ ಹೇಳಿಕೆಗೆ ಓವೈಸಿ ತಿರುಗೇಟು

Share the Article

ಜನಸಂಖ್ಯಾ ನಿಯಂತ್ರಣದ ಕುರಿತು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ನೀಡಿದ ಹೇಳಿಕೆಯೊಂದಕ್ಕೆ ಅಸಾದುದ್ದೀನ್ ಓವೈಸಿ ತಿರುಗೇಟು ನೀಡಿದ್ದಾರೆ.
ಅವರ ಪ್ರಕಾರ, ” ದೇಶದಲ್ಲಿ ಮುಸ್ಲಿಮರ ಜನಸಂಖ್ಯೆ ಹೆಚ್ಚಾಗುತ್ತಿಲ್ಲ. ಕಾಂಡೋಮ್ ಅತಿ ಹೆಚ್ಚು ಬಳಸುವವರು ಮುಸ್ಲಿಮರೇ ಎಂದು ಎಐಎಂಐಎಂ ಪಕ್ಷದ ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದರೂ ಆಗಿರುವ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

“ಮುಸ್ಲಿಮರ ಜನಸಂಖ್ಯೆ ಹೆಚ್ಚುತ್ತಿಲ್ಲ. ಬದಲಾಗಿ ಇಳಿಕೆಯಾಗುತ್ತಿದೆ. ಮುಸ್ಲಿಮರ ಮಕ್ಕಳ ನಡುವಿನ ಅಂತರ ಹೆಚ್ಚಾಗುತ್ತಿದೆ. ಹಾಗಾಗಿ ಕಾಂಡೋಮ್ ನ್ನು ಅತಿ ಹೆಚ್ಚು ಬಳಸುತ್ತಿರುವವರು ನಾವು. ಮೋಹನ್ ಭಾಗವತ್ ಅವರು ಇದರ ಬಗ್ಗೆ ಮಾತನಾಡುವುದಿಲ್ಲ’ ಎಂದು ಓವೈಸಿ ಹೈದರಾಬಾದ್‌ನಲ್ಲಿ ಸೇರಿದ್ದ ಜನಸಮೂಹವನ್ನು ಉದ್ದೇಶಿಸಿ ಮಾತನಾಡಿದ್ದಾರೆ.

Leave A Reply