ರಾಜ್ಯದ 5,8 ನೇ ತರಗತಿಗೆ ಬೋರ್ಡ್ ಪರೀಕ್ಷೆ ಇಲ್ಲ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

SSLC ಮಾದರಿಯಲ್ಲಿ ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ಯಾವುದೇ ಉದ್ದೇಶವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಸ್ಪಷ್ಟ ಪಡಿಸಿದ್ದಾರೆ. ಆದರೆ ಪರ್ಯಾಯ ಪರೀಕ್ಷೆ ನಡೆಸುವ ಬಗ್ಗೆ ಚಿಂತನೆ ನಡೆದಿದೆ ಹೇಳಿದ್ದಾರೆ. ಬೋರ್ಡ್ ಪರೀಕ್ಷೆ ಮಾದರಿಯಲ್ಲದೆ ಪರ್ಯಾಯವಾಗಿ ಮಕ್ಕಳ ಕಲಿಕೆಗೆ ಒತ್ತು ನೀಡುವ ನಿಟ್ಟಿನಲ್ಲಿ ಯೋಚಿಸಲಾಗುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಪ್ರಕಾರ 5 ನೇ ತರಗತಿಗೆಪರ್ಯಾಯ ಪರೀಕ್ಷೆ ನಡೆಸಲು ಚಿಂತನೆ ಇದೆ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣದ ಗುಣಮಟ್ಟ ಹೆಚ್ಚಿಸಲು 5 ಮತ್ತು 8 ನೇ ತರಗತಿಗೆ ಪರ್ಯಾಯವಾಗಿ ಪರೀಕ್ಷೆ ನಡೆಸುವ ಬಗ್ಗೆ ಚರ್ಚೆಯಾಗಿದೆ. ಇದು ಎಸ್‌ಎಸ್ ಎಲ್ ಸಿ ಮಾದರಿಯ ಬೋರ್ಡ್ ಪರೀಕ್ಷೆ ಆಗಿರುವುದಿಲ್ಲ. ಈ ಬಗ್ಗೆ ಅಕ್ಟೋಬರ್ 13 ರಂದು ನಡೆಯುವ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Leave A Reply

Your email address will not be published.