ಬಸ್ ಹತ್ತುವಾಗ ಕೆಳಗೆ ಬಿದ್ದ ವಿದ್ಯಾರ್ಥಿನಿ ಮೇಲೆ ಹರಿದ ಬಸ್; ವಿದ್ಯಾರ್ಥಿನಿ ಸಾವು ಬದುಕಿನ ಮಧ್ಯೆ ಹೋರಾಟ

ಬಸ್ ಹತ್ತುವಾಗ ವಿದ್ಯಾರ್ಥಿನಿಯೋರ್ವಳು ಜಾರಿ ಬಿದ್ದು ಬಸ್ ಹರಿದ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಗಾಯಗೊಂಡಾಕೆಯ ಸ್ಥಿತಿ ಚಿಂತಾಜನಕವಾಗಿದೆ. ಬಸ್ ಹತ್ತುವಾಗ ಕೆಳಗೆ ಬಿದ್ದ ವಿದ್ಯಾರ್ಥಿನಿ ಮೇಲೆ ಬಸ್ ಹರಿದ ಘಟನೆ ನಗರದ ಜ್ಞಾನಭಾರತಿ ವಿಶ್ವವಿದ್ಯಾಲಯದ ಬಳಿ ನಡೆದಿದೆ. ಗಾಯಾಳುವಿನ ಸ್ಥಿತಿ ಗಂಭೀರವಾಗಿದೆ.


Ad Widget

Ad Widget

Ad Widget

Ad Widget
Ad Widget

Ad Widget

ಗಾಯಗೊಂಡ ವಿದ್ಯಾರ್ಥಿನಿ ಮೊದಲ ವರ್ಷದ ಉನ್ನತ ವ್ಯಾಸಾಂಗ ಮಾಡುತ್ತಿದ್ದು, ಕೋಲಾರ ಮೂಲದ ವಿದ್ಯಾರ್ಥಿನಿ ಶಿಲ್ಪಾ ಎಂಬಾಕೆ. ಬಿಎಂಟಿಸಿ ಬಸ್ ಹತ್ತುವಾಗ ಕೆಳಗೆ ಬಿದ್ದಿದ್ದಾಳೆ. ಈ ವೇಳೆ ಬಸ್ ಆಕೆಯ ಮೇಲೆ ಹರಿದು ಹೋಗಿದೆ. ಗಂಭೀರವಾಗಿ ಗಾಯಗೊಂಡ ಶಿಲ್ಪಾಳನ್ನು ನಾಗರಬಾವಿ ಪೋರ್ಟೀಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ. ಘಟನೆಯಿಂದ ಕೆರಳಿದ ವಿದ್ಯಾರ್ಥಿ ಸಮೂಹ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದು, ಬಸ್ ಚಾಲಕನನ್ನು ಬಂಧಿಸುವಂತೆ ಆಗ್ರಹಿಸಲಾಗುತ್ತಿದೆ


Ad Widget
error: Content is protected !!
Scroll to Top
%d bloggers like this: