ನಟಿ ನಯನತಾರಗೆ ಹುಟ್ಟಿದ ಅವಳಿ ಮಕ್ಕಳು | ತನಿಖೆಗೆ ಆದೇಶಿಸಿದ ತಮಿಳುನಾಡು ಸರಕಾರ !

ನಿನ್ನೆಯಷ್ಟೇ ಮಗುವನ್ನು ಪಡೆದಿರುವುದಾಗಿ ನಟಿ ನಯನತಾರಾ ಮತ್ತು ವಿಘ್ನೇಶ್ ಶಿವನ್ ಘೋಷಿಸಿದ್ದರು. ಅದು ಅವಳಿ ಜವಳಿ ಮಕ್ಕಳಾಗಿರುವ ಮತ್ತು ಆ ಮಗುವಿಗೆ ಹೆಸರೂ ಇಟ್ಟಿರುವ ಕುರಿತು ಖುಷಿಯನ್ನು ಸೋಷಿಯಲ್ ಹಂಚಿಕೊಂಡಿದ್ದರು. ಮನೆಗೆ ಮಕ್ಕಳು ಬಂದು ಖುಷಿಯಲ್ಲಿರುವ ದಂಪತಿಗೆ ತಮಿಳುನಾಡು ಸರಕಾರ ಶಾಕ್ ಇಟ್ಟಿದೆ. ಬಾಡಿಗೆ ತಾಯ್ತನದ ಮೂಲಕ ಮಗು ಪಡೆದದ್ದು ನಿಯಮಗಳ ಪ್ರಕಾರವೇ ಇದೆಯಾ ಎಂದು ಅಲ್ಲಿನ ಡಿಎಂಕೆ ಸರಕಾರ ಕೇಳಿದೆ.

ಕಾರಣ ಬಾಡಿಗೆ ತಾಯ್ತನದ ಮೂಲಕ ಈ ದಂಪತಿ ಮಗುವನ್ನು ಪಡೆದದ್ದು. ಸರಕಾರವು ರೂಪಿಸಿದ ಹಲವು ನಿಯಮಗಳ ಅನುಸಾರ ನಯನತಾರಾ ಮತ್ತು ವಿಘ್ನೇಶ್ ಶಿವನ್ ಮಕ್ಕಳನ್ನು ಪಡೆದಿದ್ದಾರೆ ಎಂಬ ಬಗ್ಗೆ ಈಗ ಸಂಶಯ ಮೂಡಿದೆ. ನಿಯಮಾವಳಿಗಳನ್ನು ಗಾಳಿಗೆ ತೂರಿ ಈ ಅಡಾಪ್ಶನ್ ಆಗಿದೆ ಎನ್ನಲಾಗುತ್ತಿದೆ. ಹಾಗಾಗಿ ತಮಿಳುನಾಡು ಸರಕಾರ ಈ ಪ್ರಕರಣದಲ್ಲಿ ತನಿಖೆಗೆ ಆದೇಶಿಸಿದೆ.

ಕಳೆದ ವರ್ಷ ಡಿಸೆಂಬರ್ ನಲ್ಲಿ ಬಾಡಿಗೆ ತಾಯ್ತನ ನಿಯಂತ್ರಣ ಕಾಯ್ದೆಯನ್ನು ಜಾರಿ ಮಾಡಲಾಗಿದೆ. ಬಾಡಿಗೆ ತಾಯಿ ಆರೋಗ್ಯವಾಗಿರಬೇಕು, ಆಕೆಯ ವಯಸ್ಸು 21-35 ರ ಅಂತರದಲ್ಲಿ ಇರಬೇಕು. ಒಂದೇ ಸಲ ಬಾಡಿಗೆ ತಾಯಿ ಆಗಲು ಸಾಧ್ಯ. ಹಾಗೂ ವಾಣಿಜ್ಯ ಉದ್ದೇಶಕ್ಕೆ ಬಾಡಿಗೆ ತಾಯ್ತನದ ಮೇಲೆ ನಿರ್ಬಂಧ ಹೇರಲಾಗಿ ಅಲ್ಲಿ ಕಾನೂನು ರೂಪಿತವಾಗಿತ್ತು.

ನಯನತಾರಾ ದಂಪತಿ ಈ ನಿಯಮಗಳನ್ನು ಪಾಲಿಸಿಲ್ಲ ಎನ್ನುವ ಅನುಮಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ತಮಿಳು ನಾಡು ವೈದ್ಯಕೀಯ ಸೇವೆಗಳ ನಿರ್ದೇಶನಾಲಯವು ತನಿಖೆಗೆ ಆದೇಶಿಸಿದೆ. ಈ ತನಿಖೆಯು ತಮ್ಮ ಅವಳಿ ಮಕ್ಕಳಾದ ಉಯಿರ್ ಮತ್ತು ಉಳಗಂ ಜೊತೆ ಆಟವಾಡುತ್ತಿದ್ದ ದಂಪತಿಗೆ ಕಿರಿಕಿರಿ ಮೂಡಿಸಿದೆ.

ವಿಘ್ನೇಶ್ ಶಿವನ್ ಮದುವೆಗೂ ಮುನ್ನವೇ ಒಂದು ಪೋಸ್ಟ್ ಹಾಕಿದ್ದರು. ಅದರಲ್ಲಿ ನಯನತಾರ ನನ್ನ ಮಕ್ಕಳ ತಾಯಿ ಆಗಲಿದ್ದಾರೆ ಎಂದು ಹೇಳಿದ್ದರು. ಅಲ್ಲಿಗೆ ನಯನತಾರ ಮತ್ತು ವಿಘ್ನೇಶ್ ಶಿವನ್ ಮದುವೆ ಆಗಲಿದ್ದಾರೆ ಎಂದು ಅಂದಾಜಿಸಲಾಗಿತ್ತು. ಅಂತೆಯೇ ಜೂನ್ ನಲ್ಲಿ ಇವರು ಹಸೆಮಣೆ ಏರಿದ್ದರು. ಮದುವೆ ದೊಡ್ಡದಾಗಿ ಸೆಲೆಬ್ರಿಟಿ ಗಳ ಮದುವೆಯಂತೆ ಜಾಮ್ ಝೂಂ ಆಗಿ ನಡೆದಿತ್ತು
ಮದುವೆಗೂ ಮುನ್ನ ಬಾಡಿಗೆ ತಾಯಿಯನ್ನು ಫಿಕ್ಸ್ ಮಾಡಿಯೇ ಇವರು ಹೊಸ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಅವರು ಬಾಡಿಗೆ ಅವಳಿ ಮಕ್ಕಳ ಅಪ್ಪ ಅಮ್ಮ ಆಗಿದ್ದಾರೆ. ಸರ್ಕಾರ ನಿಯಮಗಳ ಉಲ್ಲಂಘನೆ ಆಗಿದೆಯಾ ಇಲ್ಲವಾ ಎಂದು ತನಿಖೆಗೆ ಇಳಿದಿದೆ.

Leave A Reply

Your email address will not be published.