ಭಾರತ್ ಜೋಡೋ ಯಾತ್ರೆ ವೇಳೆ ಖಾಸಗಿ ಬಸ್ ಡಿಕ್ಕಿ : ಕಾಂಗ್ರೆಸ್ ಕಾರ್ಯಕರ್ತ ಮೃತ್ಯು

Share the Article

ಭಾರತ್ ಜೋಡೋ ಯಾತ್ರೆ ವೇಳೆ ಕಾರ್ಯಕರ್ತರನ್ನು ಕರೆ ತಂದಿದ್ದ ಖಾಸಗಿ ಬಸ್ ಡಿಕ್ಕಿಯಾಗಿ, ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆ ಹಿರಿಯೂರು ಪಟ್ಟಣದ ಟಿ.ಬಿ.ವೃತ್ತದ ಬಳಿ ನಡೆದಿದೆ.

ಶಿವಮೊಗ್ಗ ಜಿಲ್ಲೆ ಸಾಗರ ಮೂಲದ ರಮೇಶ(38) ಮೃತ ದುರ್ದೈವಿ. ಖಾಸಗಿ ಬಸ್ ಭಾರತ ಜೋಡೋ ಯಾತ್ರೆಗೆ ಕಾರ್ಯಕರ್ತನನ್ನು ಕರೆದುಕೊಂಡು ಬಂದಿತ್ತು. ಸಾವನ್ನಪ್ಪಿದ ರಮೇಶ ಕೂಡ ಜೋಡೋ ಯಾತ್ರೆಯಲ್ಲಿ ಭಾಗವಹಿಸಲೆಂದು ಆಗಮಿಸಿದ್ದರು.

ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿಯಾಗಿ ಸಾವನ್ನಪ್ಪಿದ್ದಾರೆ. ಹಿರಿಯೂರು ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Leave A Reply