Eid Milad : ಈದ್ ಮಿಲಾದ್ ಮೆರವಣಿಗೆ ಸಂದರ್ಭ ತ್ರಿವರ್ಣ ಧ್ವಜದಲ್ಲಿ ಇಸ್ಲಾಂ ಧಾರ್ಮಿಕ ಸಂಕೇತ ಬಳಕೆ | ಕೇಸು ದಾಖಲು
ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ವಿವಾದಾತ್ಮಕವಾಗಿ ಕಾಣುವ ಧ್ವಜ ಬಳಕೆ ಮಾಡಿದ ಘಟನೆಯೊಂದು ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಭಾನುವಾರ ಈದ್ ಮಿಲಾದ್ ಹಬ್ಬದ ಆಚರಣೆಯ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಮೆರವಣಿಗೆ ನಡೆದಿದ್ದು, ಈ ವೇಳೆ ರಾಷ್ಟ್ರಧ್ವಜ ಮಾದರಿಯ ಕೇಸರಿ ಬಿಳಿ ಹಸಿರು ಧ್ವಜದಲ್ಲಿ ಇಸ್ಲಾಂ ಧರ್ಮದ ಸಂಕೇತ ಬಳಕೆ ಮಾಡಿ ಮೆರವಣಿಗೆಯಲ್ಲಿ ಪ್ರದರ್ಶನ ಮಾಡಲಾಗಿದೆ. ಅಶೋಕ ಚಕ್ರ ಇರುವ ಜಾಗದಲ್ಲಿ ಇಸ್ಲಾಂನ ಸಂಕೇತವಾದ ಅರ್ಧ ಚಂದ್ರ ಮತ್ತು ನಕ್ಷತ್ರದ ಚಿತ್ರವನ್ನು ಹಾಕಲಾಗಿದೆ.
ಗಂಗಾವತಿ ನಗರ ಠಾಣೆಯ ಪೊಲೀಸರು ಇದನ್ನು ಗಮನಿಸಿದ್ದು, ತಕ್ಷಣವೇ ಕ್ರಮಕ್ಕೆ ಮುಂದಾದರು. ಆದರೆ, ಆತ ತಪ್ಪಿಸಿಕೊಂಡಿದ್ದು, ಪೊಲೀಸರು ಈಗ ದೂರು ದಾಖಲಿಸಿಕೊಂಡಿದ್ದಾರೆ. ರಾಷ್ಟ್ರಧ್ವಜಕ್ಕೆ ಅವಮಾನ ತಡೆಗಟ್ಟುವ ಕಾಯ್ದೆ 1971 ರ ಪ್ರಕಾರ ದೂರು ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲೂಕಿನ ಚಿಕ್ಕೆರೂರ ಗ್ರಾಮದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಯುವಕನೋರ್ವ ಅವಹೇಳನಕಾರಿ ಪೋಸ್ಟ್ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಈದ್ ಮೀಲಾದ್ ಆಚರಣೆ ಸಂದರ್ಭದಲ್ಲಿ ಈ ಪೋಸ್ಟ್ ಮಾಡಲಾಗಿದೆ.
ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲೂಕಿನ ಚಿಕ್ಕೆರೂರ ಗ್ರಾಮದಲ್ಲಿ ಯುವಕನೊಬ್ಬ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿ ಬಂಧನಕ್ಕೊಳಗಾಗಿದ್ದಾನೆ. ಈ ಘಟನೆ ಕೂಡಾ ಈದ್ ಮೀಲಾದ್ ಆಚರಣೆ ಸಂದರ್ಭದಲ್ಲಿ ಈ ಪೋಸ್ಟ್ ಮಾಡಲಾಗಿದೆ.
ಪಾಕಿಸ್ತಾನ ಧ್ವಜ ಮತ್ತು ಅದರ ಪಕ್ಕದಲ್ಲಿ myvillege chota PK ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದ. ತನ್ನ ಇನ್ ಸ್ಟಾಗ್ರಾಮ್ ಅಕೌಂಟ್ ಸ್ಟೇಟಸ್ ನಲ್ಲಿ ವಿಡಿಯೊ ಹಾಕಿಕೊಂಡಿದ್ದನ್ನು ಗಮನಿಸಿದ ಹಂಸಬಾವಿ ಪೊಲೀಸರು ಯುವಕನನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.
ಖಲಂದರ್ ಅತಾವುಲ್ಲಾ ನಿಟ್ಟೂರ ಎಂಬಾತನೇ ಈ ಕೃತ್ಯ ಬಂಧಿತ ಆರೋಪಿಯಾಗಿದ್ದು, ಸಾರ್ವಜನಿಕ ಶಾಂತಿಗೆ ಭಂಗ ತರುವ ಉದ್ದೇಶದಿಂದ ಸ್ಟೇಟಸ್ ಹಾಕಿಕೊಂಡಿದ್ದಾನೆಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ.