ಹೆತ್ತಮ್ಮಳ ಎದುರೇ ಅಪ್ರಾಪ್ತ ಮಗಳ ಸಾಮೂಹಿಕ ಅತ್ಯಾಚಾರ ಮಾಡಿದ ಕಾಮುಕರು !!!

Share the Article

ಹೆತ್ತ ಮಗಳನ್ನೇ ತಾಯಿಯ ಎದುರೇ ಸಾಮೂಹಿಕ ಅತ್ಯಾಚಾರ ಮಾಡಿದ ಘಟನೆಯೊಂದು ಜಾರ್ಖಂಡ್ ನಲ್ಲಿ ನಡೆದಿದೆ. ತನ್ನ ಮಗಳನ್ನು ತನ್ನ ಕಣ್ಮುಂದೆ ಈ ರೀತಿಯ ಕೃತ್ಯ ಆಗುತ್ತಿರುವುದು ನೋಡಿ ತಾಯಿಗೇ ಏನಾಗಬೇಡ.

ಅಪ್ರಾಪ್ತ ಬಾಲಕಿಯ ಮೇಲೆ ಐವರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ನಡೆದಿದೆ.

ದುಮ್ಕಾ ಜಿಲ್ಲೆಯ ನಿವಾಸಿಗಳಾದ ಬಾಲಕಿ ಮತ್ತು ಆಕೆಯ ತಾಯಿ ಭಾನುವಾರ ದಿಯೋಘರ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ನಂತರ ಮನೆಗೆ ವಾಪಾಸು ಬರುತ್ತಿದ್ದ ಸಂದರ್ಭದಲ್ಲಿ, ಮಧುಪುರ್ ಪ್ರದೇಶದಲ್ಲಿ ಎರಡು ದ್ವಿಚಕ್ರವಾಹನಗಳಲ್ಲಿ ಬಂದ ಐದು ಜನರು ಬಾಲಕಿಯನ್ನು ಎಳೆದೊಯ್ದಿದ್ದಾರೆ.

ಇದನ್ನು ತಡೆಯಲು ಮುಂದಾದ ಆಕೆಯ ತಾಯಿಯನ್ನು ಥಳಿಸಿದ್ದು, ಆಕೆಯ ಎದುರೇ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾರೆ. ಈ ಘಟನೆಯ ಕುರಿತು ಬಾಲಕಿಯ ತಾಯಿ ಸೋಮವಾರ ಪೊಲೀಸರಿಗೆ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಲಾಗಿದೆ. ಇಲ್ಲಿಯವರೆಗೆ ಇಬ್ಬರನ್ನು ಬಂಧಿಸಲಾಗಿದ್ದು, ಇನ್ನುಳಿದ ಮೂವರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave A Reply