ವಿಟ್ಲ: ಮುಸ್ಲಿಂ ವ್ಯಕ್ತಿಯಿಂದ ಹಿಂದೂ ಯುವತಿಯ ಮಾನಭಂಗಕ್ಕೆ ಯತ್ನ!! ಕ್ಷಿಪ್ರ ಕಾರ್ಯಾಚರಣೆ-ಆರೋಪಿ ಬಂಧನ!!

ವಿಟ್ಲ: ಇಲ್ಲಿನ ಪುಣಚ ಬಳಿಯ ಮೆಡಿಕಲ್ ಶಾಪ್ ಒಂದರಲ್ಲಿ ಕೆಲಸಕ್ಕಿದ್ದ ಹಿಂದೂ ಯುವತಿಯೊಬ್ಬಳಿಗೆ ಮುಸ್ಲಿಂ ವ್ಯಕ್ತಿಯೊಬ್ಬ ಕಿರುಕುಳ ನೀಡಿದ್ದಲ್ಲದೇ, ಮಾನಭಂಗಕ್ಕೆ ಯತ್ನಿಸಿದ ಘಟನೆ ಬೆಳಕಿಗೆ ಬಂದಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಲೇ ಆರೋಪಿಯ ಬಂಧನವಾಗಿದೆ.

ಬಂಧಿತ ಆರೋಪಿಯನ್ನು ಸ್ಥಳೀಯ ಪಂಚಾಯತ್ ಸ್ವಚ್ಛತಾ ಸಿಬ್ಬಂದಿ ಉಸ್ಮಾನ್ ಎಂದು ಗುರುತಿಸಲಾಗಿದ್ದು, ಈತ ಮೆಡಿಕಲ್ ನಲ್ಲಿ ಕೆಲಸಕ್ಕಿದ್ದ ಹಿಂದೂ ಯುವತಿಗೆ ಕಿರುಕುಳ ನೀಡಿದ್ದ ಎನ್ನಲಾಗಿದೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ವಿಚಾರ ಎಲ್ಲೆಡೆ ಸುದ್ದಿಯಾಗುತ್ತಲೇ ಹಿಂದೂ ಸಂಘಟನೆಗಳು ಗರಂ ಆಗಿವೆ. ಕೂಡಲೇ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯ ಹೆಡೆಮುರಿಕಟ್ಟಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave A Reply

Your email address will not be published.