Big Breaking | ಹಿಜಾಬ್ ಪ್ರಕರಣ : ನ್ಯಾಯಮೂರ್ತಿಗಳಿಂದ ವಿಭಿನ್ನ ತೀರ್ಪು | ಸಿಜೆಐ ಪೀಠಕ್ಕೆ ವರ್ಗಾವಣೆ !

ಹಿಜಾಬ್ ಧರಿಸಲು ಅನುಮತಿ ಕೋರಿ ಹೈಕೋರ್ಟ್ ಆದೇಶ ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ.

ನ್ಯಾಯಮೂರ್ತಿಗಳ ವಿಭಿನ್ನ ತೀರ್ಪಿನಿಂದ ಈ ಪ್ರಕರಣವನ್ನು ಸಿಜೆಐ ಪೀಠಕ್ಕೆ ವರ್ಗಾಯಿಸಲಾಗಿದೆ. ಹಾಗಾಗಿ ಸುಪ್ರೀಂಕೋರ್ಟ್ ತೀರ್ಪು ಬರುವವರೆಗೆ ಹೈಕೋರ್ಟ್ ತೀರ್ಪು ಯಥಾಸ್ಥಿತಿ ಮುಂದುವರಿಯಲಿದೆ. ಹಾಗಾಗಿ ಶಾಲಾ ಕಾಲೇಜುಗಳಿಗೆ ಹಿಜಾಬ್ ಧರಿಸಿ ಬರಲು ಅವಕಾಶವಿಲ್ಲ. ನ್ಯಾಯಾಲಯದಲ್ಲಿ ನ್ಯಾಯಮೂರ್ತಿಗಳಲ್ಲಿ ಒಬ್ಬರು ಪರ ಹಾಗೂ ಇನ್ನೊಬ್ಬರು ವಿರೋಧ ತೀರ್ಪು ನೀಡಿದ್ದರಿಂದ ಇದನ್ನು ಸಿಜೆಐಗೆ ವರ್ಗಾವಣೆ ಮಾಡಲಾಗಿದೆ. ಇಬ್ಬರು ನ್ಯಾಯಮೂರ್ತಿಗಳು ಸ್ಪ್ಲಿಟ್ ಜಡ್ಜ್ ಮೆಂಟ್ ನೀಡಿದ ಕಾರಣ, ಹೈಕೋರ್ಟ್ ತೀರ್ಪು ಮುಂದುವರಿಯಲಿದೆ. ಹಾಗಾಗಿ ಯಾವುದೇ ಒಂದು ಅಂತಿಮ ತೀರ್ಪುಗೆ ಸುಪ್ರೀಂ ಕೋರ್ಟ್ ಮಾಡಿಲ್ಲ.

ಮುಸ್ಲಿಂ ವಿದ್ಯಾರ್ಥಿನಿಯರ ವಿದ್ಯಾಭ್ಯಾಸ ದೃಷ್ಟಿಯಿಂದ ಹೈಕೋರ್ಟ್ ಆದೇಶವನ್ನು ವಿರೋಧಿಸುತ್ತೇನೆ- ನ್ಯಾಯಮೂರ್ತಿ ಧುಲಿಯಾ ಅಭಿಪ್ರಾಯ

ಹಿಜಾಬ್ ಧರಿಸೋದು ಅವರವರ ಆಯ್ಕೆಗೆ ಬಿಟ್ಟದ್ದು – ನ್ಯಾಯಮೂರ್ತಿ ಸುಧಾಂಶು ಗುಪ್ತಾ ಅಭಿಪ್ರಾಯ

ನ್ಯಾಯಮೂರ್ತಿಗಳ ಈ ವಿಭಿನ್ನ ಅಭಿಪ್ರಾಯಗಳಿಂದ ಈ ಹಿಜಾಬ್ ಪ್ರಕರಣವನ್ನು ಸಿಜೆಐ ಪೀಠಕ್ಕೆ ವರ್ಗಾಯಿಸಲಾಗಿದೆ.

ಮುಂದಿನ ದಿನಗಳಲ್ಲಿ ಮುಖ್ಯ ನ್ಯಾಯಮೂರ್ತಿ ಪ್ರಕರಣದ ವಿಚಾರಣೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಅನಂತರವಷ್ಟೇ ಸುಪ್ರೀಂಕೋರ್ಟ್​ನ ಆದೇಶ ಪ್ರಕಟವಾಗಲಿದ್ದು, ಅದು ಹೈಕೋರ್ಟ್​ ಆದೇಶದ ಜಾಗದಲ್ಲಿ ಊರ್ಜಿತಕ್ಕೆ ಬರಲಿದೆ. ಹೀಗಾಗಿ ಸದ್ಯದ ಮಟ್ಟಿಗೆ ಕರ್ನಾಟಕ ಹೈಕೋರ್ಟ್​ನ ಆದೇಶ ಯಥಾಸ್ಥಿತಿ ಮುಂದುವರಿಯಲಿದ್ದು, ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಕಾನೂನು ತಜ್ಞರು ಹಾಗೂ ವಕೀಲರು ಅಭಿಪ್ರಾಯಪಟ್ಟಿದ್ದಾರೆ.

ಘಟನೆ ವಿವರ: ದೇಶ-ವಿದೇಶಗಳಲ್ಲೂ ತೀವ್ರ ಚರ್ಚೆಗೆ ಕಾರಣವಾಗಿದ್ದ, ಉಡುಪಿಯಲ್ಲಿ ಆರಂಭವಾಗಿ ನಂತರ ರಾಜ್ಯಾದ್ಯಂತ ಸಂಘರ್ಷ ಸೃಷ್ಟಿಸಿದ್ದ ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆ ಸುಪ್ರೀಂ ಕೋರ್ಟಿನಲ್ಲಿ ನಡೆಯುತ್ತಿದೆ. ಉಡುಪಿಯ ಬಾಲಕಿಯರ ಸರ್ಕಾರಿ ಪಿಯು ಕಾಲೇಜಿನ ಆರು ವಿದ್ಯಾರ್ಥಿನಿಯರು ಹಿಜಾಬ್‌ಗೆ ತರಗತಿಯಲ್ಲಿ ನಿರ್ಬಂಧ ವಿಧಿಸಿದ ಕಾಲೇಜಿನ ನಿರ್ಧಾರವನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದರು.

ಈ ಕುರಿತು ವಿಚಾರಣೆ ನಡೆಸಿದ್ದ ಹೈಕೋರ್ಟ್ ಶಾಲಾ, ಕಾಲೇಜಿನ ತರಗತಿಗಳಿಗೆ ಹಿಜಾಬ್‌ ಧರಿಸಿ ಹಾಜರಾಗುವುದನ್ನು ನಿಷೇಧಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಎತ್ತಿ ಹಿಡಿದಿತ್ತು. ಅಲ್ಲದೆ, ಹಿಜಾಬ್‌ ಧಾರಣೆ ಇಸ್ಲಾಂನ ಅವಿಭಾಜ್ಯ ಅಂಗವಲ್ಲ ಎಂದೂ ವ್ಯಾಖ್ಯಾನಿಸಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ವಿದ್ಯಾರ್ಥಿಗಳು ಸುಪ್ರೀಂ ಕೋರ್ಚ್‌ ಮೊರೆ ಹೋಗಿದ್ದರು.

ರಾಜ್ಯದ ಎಲ್ಲಾ ಶಾಲೆ, ಕಾಲೇಜುಗಳಲ್ಲಿ ಪಾಲನೆ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸಿದ್ದಾರೆ. ಸುಪ್ರೀಂ ಕೋರ್ಟ್ ನಲ್ಲಿ ಉತ್ತಮ ಆದೇಶದ ನಿರೀಕ್ಷೆಯಿತ್ತು. ಆದ್ರೆ ಇದೀಗ ಪ್ರಕರಣ ಸಿಜೆಐ ಪೀಠಕ್ಕೆ ವರ್ಗಾವಣೆ ಮಾಡಿದೆ. ಹೀಗಾಗಿ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಉತ್ತಮ ಆದೇಶ ನೀಡಲಿದೆ ಎಂದಿದ್ದಾರೆ.

ವಿದ್ಯಾರ್ಥಿಗಳು ರಾಜ್ಯದಲ್ಲಿ ಹಿಜಾಬ್ ಧರಿಸಿ ತರಗತಿಯ ಒಳಗೆ ಪ್ರವೇಶವನ್ನು ಅವಕಾಶವನ್ನು ನೀಡುವುದಿಲ್ಲ. ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ನೀಡುವವರೆಗೂ ಕೂಡ ಹೈಕೋರ್ಟ್‌ ಆದೇಶ ಮುಂದುವರಿಕೆಯಾಗಲಿದೆ. ಸ್ತ್ರಿ ಸ್ವಾತಂತ್ರ್ಯದ ಬಗ್ಗೆ ಶಿಕ್ಷಣ ವ್ಯವಸ್ಥೆಯನ್ನು ಸುವ್ಯವಸ್ಥೆಗೊಳಿಸುವ ನಿಟ್ಟಿನಲ್ಲಿ ಉತ್ತಮ ಆದೇಶ ಬರುವ ನಿರೀಕ್ಷೆಯನ್ನು ಇಟ್ಟುಕೊಂಡಿದ್ದೆವು ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.

Leave A Reply

Your email address will not be published.