good news: ರಾಜ್ಯದ ಸ್ಮಶಾನ ಕಾರ್ಮಿಕರ ಮಕ್ಕಳಿಗೆ ಶಾಲೆಗಳಲ್ಲಿ ಪ್ರವೇಶಾವಕಾಶ ಕಲ್ಪಿಸಲು ಯೋಜನೆ
ರಾಜ್ಯದ ಸ್ಮಶಾನ ಕಾರ್ಮಿಕರ ಮಕ್ಕಳಿಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶಾವಕಾಶ ಯೋಜನೆ ಜಾರಿಗೆ ತರುವ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದ್ದಾರೆ.
ರಾಜ್ಯದ ವಿವಿಧ ಸ್ಮಶಾನಗಳಲ್ಲಿ ಬಹು ವರ್ಷಗಳಿಂದ ದುಡಿಯುತ್ತಿರುವ ಕಾರ್ಮಿಕರಿಗೆ ಖಾಯಂ ಸಮಾನ ವೇತನ ನೀಡುವ ಸಂಬಂಧ ಪ್ರಸ್ತಾವನೆ ಸಿದ್ಧಪಡಿಸುವಂತೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮಹಾನಗರ ಪಾಲಿಕೆಗಳು, ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆ, ಗ್ರಾಮ ಪಂಚಾಯಿತಿಗಳಲ್ಲಿನ ಸ್ಮಶಾನಗಳಲ್ಲಿ ಕೆಲಸ ನಿರ್ವಹಿಸುವವರ ಮಾಹಿತಿಯನ್ನು ಕ್ರೋಢೀಕರಿಸಿ ಅವರ ಕಲ್ಯಾಣಕ್ಕೆ ಕಾರ್ಯಕ್ರಮ ರೂಪಿಸುವ ಸಂಬಂಧ ಪ್ರಸ್ತಾಪನೆ ಸಿದ್ದಪಡಿಸಲು ಕೋಟ ಶ್ರೀನಿವಾಸ್ ಪೂಜಾರಿಯವರು ಸೂಚನೆ ನೀಡಿದ್ದಾರೆ.
ಸ್ಮಶಾನ ಕಾರ್ಮಿಕರ ಮಕ್ಕಳನ್ನು ರಾಜ್ಯದ ಪ್ರತಿಷ್ಟಿತ ಶಾಲೆಗಳಿಗೆ ಪ್ರವೇಶ ಕಲ್ಪಿಸುವ ಯೋಜನೆ ವ್ಯಾಪ್ತಿಗೆ ತರುವುದಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದು, ಸ್ಮಶಾನ ಕಾರ್ಮಿಕರಿಗೆ ವಸತಿ ಯೋಜನೆ, ಅವರ ಮಕ್ಕಳಿಗೆ ರಾಜ್ಯದ ಪ್ರತಿಷ್ಠಿತ ಶಾಲೆಗಳಲ್ಲಿ ಹಾಗೂ ವಸತಿ ಶಾಲೆಗಳಲ್ಲಿ ಶಿಕ್ಷಣ ಕೊಡಿಸುವ ಮತ್ತು ಪಡಿತರ ವಿತರಣೆ ಸಂಬಂಧ ಯೋಜನೆ ರೂಪಿಸಲು ತೀರ್ಮಾನ ಕೈಗೊಳ್ಳಲಿದೆ.
ಪ್ರತಿಷ್ಠಿತ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುವ ಯೋಜನೆಯಲ್ಲಿ ಅಲೆಮಾರಿ, ದೇವದಾಸಿಯರ ಮಕ್ಕಳು, ಪೋಷಕರು ಮೃತರಾಗಿ ಅನಾಥರಾದ ಮಕ್ಕಳು , ಅಂಗವಿಕಲ ಮಕ್ಕಳು ಸೇರಿ 14 ವಿಧದ ಒಂದು ಸಾವಿರ ಮಕ್ಕಳನ್ನು ಪ್ರತಿವರ್ಷ ಓದಿಸುವ ಯೋಜನೆ ಇದ್ದು, ಇದಕ್ಕೆ ಸ್ಮಶಾನ ಕಾರ್ಮಿಕರ ಮಕ್ಕಳು ಕೂಡ ಸೇರಲಿದ್ದಾರೆ.
ಸ್ಮಶಾನ ಕಾರ್ಮಿಕರ ಮಕ್ಕಳಿಗೆ ಆದ್ಯತೆ ನೀಡಿ ಸರ್ಕಾರಿ ಆದೇಶ ಹೊರಡಿಸಲಾಗುತ್ತದೆ. ಪ್ರವೇಶ ಸಂಖ್ಯೆಯನ್ನು 1000 ದಿಂದ 2000 ಕ್ಕೆ ಹೆಚ್ಚಿಸಲು ಕ್ರಮ ವಹಿಸಲಾಗುತ್ತದೆ.
ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು 200 ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದು, ಕೇವಲ ಇಬ್ಬರು ಮಾತ್ರ ಖಾಯಂ ಸಿಬ್ಬಂದಿಯಾಗಿದ್ದಾರೆ.
ಉಳಿದ 148 ಸಿಬ್ಬಂದಿ ನೇರ ವೇತನ ಪಡೆಯುತ್ತಿದ್ದು, ಅವರನ್ನು ಖಾಯಂ ಗೊಳಿಸುವ ಅಥವಾ ಖಾಯಂ ಹುದ್ದೆಯ ಸಮಾನ ವೇತನ ನೀಡುವ ಬಗ್ಗೆ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಲು ಆದೇಶ ಕೂಡ ಹೊರಡಿಸಿದ್ದಾರೆ.